ಮೈಸೂರು

ಹುಣಸೂರಿನಲ್ಲಿ ಧ್ಯಾನ ಕುಟೀರ ಉದ್ಘಾಟನೆ

Published On :

ಹುಣಸೂರು: ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ಶ್ರದ್ಧಾಭಕ್ತಿಯಿಂದ ನಿರ್ವಹಿಸಿದಲ್ಲಿ ಆಧ್ಯಾತ್ಮ ಚಿಂತನೆಗಳು ಅನುಷ್ಠಾನವಾದಂತೆ ಎಂದು ಶಾಸಕ ಎಚ್.ಪಿ. ಮಂಜುನಾಥ್ ಅಭಿಪ್ರಾಯಪಟ್ಟರು.
ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿಯಲ್ಲಿ ನೂತನವಾಗಿ ನಿರ್ಮಿಸಿದ್ದ ಧ್ಯಾನ ಕುಟೀರದ ಉದ್ಘಾಟನೆ ಹಾಗೂ ರಾಜಯೋಗ ಭವನದ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಧ್ಯಾನ,  ಆಧ್ಯಾತ್ಮ ಚಿಂತನೆ ಇವೆಲ್ಲವು ನನ್ನಂತಹ ರಾಜಕಾರಣಿಗಳಿಗೆ ಬಲು ದೂರ. ಇವುಗಳ ಕುರಿತು ಚಿಂತಿಸುವ, ಯೋಚನೆ ಮಾಡುವಷ್ಟು ತಾಳ್ಮೆ ನಮ್ಮಂತಹವರಲ್ಲಿ ಇರುವುದಿಲ್ಲ. ಆದರೆ ಒಂದಂತೂ ಸತ್ಯ. ನೀವು ಯಾವುದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರೂ ಆ ಕಾರ್ಯದಲ್ಲಿ ಶ್ರದ್ಧೆ, ಭಕ್ತಿ ಹಾಗೂ ನಿಸ್ವಾರ್ಥ ಸೇವೆಯನ್ನು ಮಾಡಿದಲ್ಲಿ ಅದೂ ಕೂಡ ದೇವರ ಸೇವೆಯೇ ಆಗುತ್ತದೆ. ತನ್ಮೂಲಕ ಆಧ್ಯಾತ್ಮ ಚಿಂತನೆಯ ಮೂಲ ತತ್ವಗಳನ್ನು ಅನುಸರಿಸಿದಂತೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು. ವಿಶ್ವವಿದ್ಯಾನಿಲಯದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ರಾಜಯೋಗ ಭವನ ಕಾರ್ಯಕ್ಕೆ ವೈಯಕ್ತಿಕವಾಗಿ 5 ಲಕ್ಷ ನೀಡುವುದಾಗಿ ಇದೇ ವೇಳೆ ಶಾಸಕರು ತಿಳಿಸಿದರು.
ನಿವೃತ್ತ ಕನ್ನಡ ಪ್ರಾಧ್ಯಾಪಕ ಎಚ್.ಆರ್. ಸಿದ್ದೇಗೌಡ ಮಾತನಾಡಿದರು. ಇದೇ ವೇಳೆ ತಮ್ಮ ಸಾಮಾಜಿಕ ಸೇವೆಯಿಂದಾಗಿ ರಾಜ್ಯ ಆರ್ಯವೈಶ್ಯ ಮಹಾಸಭಾದಿಂದ 2013ನೇ ಸಾಲಿನ ಅತ್ಯುತ್ತಮ ಸಮಾಜ ಸೇವಕ ಮಾಕಂ ನಾಗರಾಜಶೆಟ್ಟರನ್ನು ಸನ್ಮಾನಿಸಲಾಯಿತು. ಬ್ರಹ್ಮಾಕುಮಾರೀಸ್‌ನ ಉಪವಲಯ ಸಂಚಾಲಕಿ ರಾಜಯೋಗಿನಿ ಬಿ.ಕೆ. ಲಕ್ಷ್ಮೀಜಿ, ಹುಣಸೂರು ಶಾಖೆಯ ಮುಖ್ಯಸ್ಥೆ ಧಾನೇಶ್ವರೀಜಿ, ಶಾರದಕ್ಕ, ಯೋಗಪ್ಪಣ್ಣ, ಮೂರ್ತಿಯಣ್ಣ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲ ಸದಸ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.