30ರಿಂದ ರೋಟೆಷಿಯಾ ಮೈಸೂರು- 2014
ಮೈಸೂರು: ದಕ್ಷಿಣ ಏಷ್ಯಾ ದೇಶಗಳಲ್ಲಿನ ರೋಟರ್ಯಾಕ್ಟ್ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ನಡೆಸುವ ರೋಟೆಷಿಯಾ ಮೈಸೂರು- 2014 ಅಂತರಾಷ್ಟ್ರೀಯ ಸಮ್ಮೇಳನವನ್ನು ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಆಯೋಜಿಸಲಾಗುತ್ತಿದೆ.
ಜ.30ರಿಂದ ಫೆ.2ರವರೆಗೆ ನಗರದ ಹುಣಸೂರು ರಸ್ತೆಯಲ್ಲಿರುವ ಸೈಲೆಂಟ್ ಶೋರ್ಸ್ ರೆಸ್ಸಾರ್ಟ್ನಲ್ಲಿ ಆಯೋಜಿಸಿದ್ದು, ಜ.30ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ, ಯುವಜನ ಸೇವಾ ಸಚಿವ ಅಭಯಚಂದ್ರ ಜೈನ್, ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅತಿಥಿಗಳಾಗಿ ಭಾಗವಹಿಸುವರು ಎಂದು ರೋಟರ್ಯಾಕ್ಟ್ನ ಜಿಲ್ಲಾಧ್ಯಕ್ಷ ಕೆ.ಆರ್. ರಾಜೀವ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಬಾರಿ ಯುವ ಸಮೂಹವನ್ನು ಉದ್ದೇಶಿಸಿ ಆಯೋಜಿಸುತ್ತಿರುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಯುವ ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ತಿಳಿಸಿಕೊಡಲಾಗುತ್ತದೆ. ಈ ಸಂಬಂಧ ಸಂಪನ್ಮೂಲ ವ್ಯಕ್ತಿಗಳಾದ ವಾಮದೇವ್ಕುಮಾರ್, ರಾಮಚಂದ್ರ ಗುರೂಜಿ, ನಾರಾಯಣ ಹೃದಯಾಲಯದ ಡಾ. ದೇವಿಶೆಟ್ಟಿ, ಸಂಸದ ಜಯಪ್ರಕಾಶ್ ಹೆಗ್ಡೆ, ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಉಪನ್ಯಾಸ ನೀಡುವರು. ಜ.31ರಂದು ಖ್ಯಾತ ಡ್ರಮ್ ವಾದಕ ಶಿವಮಣಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುವರು. ಫೆ.2ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ನಟ ಸುದೀಪ್ ಅತಿಥಿಗಳಾಗಿ ಭಾಗವಹಿಸುವರು. ಈ ನಾಲ್ಕು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಮಳಿಗೆಗಳನ್ನು ಪ್ರದರ್ಶಿಸುವರು ತಮ್ಮನ್ನು ಸಂಪರ್ಕಿಸುವಂತೆ ಕೋರಿದರು. ಮೊ. 98804 50657 ಸಂಪರ್ಕಿಸಬಹುದು. ರೋಟರ್ಯಾಕ್ಟ್ನ ಪದಾಧಿಕಾರಿಗಳಾದ ವೇಣುಗೋಪಾಲ್, ಆರ್.ಎಲ್. ಮಹದೇವಸ್ವಾಮಿ, ವರುಣ್ ಬಜಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

