ರಾಷ್ಟ್ರೀಯ ಸಾಮಾಜಿಕ ಯೋಜನೆ ನೆರವು ಪಡೆಯಿರಿ
ಮೈಸೂರು: ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮ ಯೋಜನೆಯ ಪ್ರಯೋಜನ ಪಡೆದುಕೊಂಡು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಹಿಳೆಯರು ಸಬಲತೆ ಸಾಧಿಸಿಕೊಳ್ಳಬೇಕೆಂದು ತಾ. ಧರ್ಮಾಪುರ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ ಕರೆ ನೀಡಿದರು.
ತಾಲೂಕಿನ ಧರ್ಮಾಪುರದಲ್ಲಿ ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಮೈಸೂರು ಘಟಕ, ತಾಪಂ, ಶಿಶು ಅಭಿವೃದ್ಧಿ ಯೋಜನೆ, ಹುಣಸೂರು ಹಾಗೂ ಗ್ರಾಪಂ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆ-ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಮೈಸೂರು ಘಟಕದ ಮುಖ್ಯಸ್ಥೆ ಡಾ.ಟಿ.ಸಿ. ಪೂರ್ಣಿಮಾ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಜನಜೀವನ ಅದರಲ್ಲೂ ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿರುವವರ ಜೀವನಮಟ್ಟ ಸುಧಾರಣೆ ಗುರಿಯೊಂದಿಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆ ಜಾರಿಗೆ ತಂದಿದ್ದು, ಇದನ್ನು ಜನರೂ ಅರಿತುಕೊಂಡು ಪಟ್ಟು ಹಿಡಿದು ತಮ್ಮ ಅನುಕೂಲಕ್ಕೆ ಒದಗಿಸುವಂತೆ ಅಧಿಕಾರಿಗಳಲ್ಲಿ ಬೇಡಿಕೆ ಮಂಡಿಸಬೇಕೆಂದು ಸಲಹೆ ನೀಡಿದರು.
ಹುಣಸೂರಿನ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ವೆಂಕಟಪ್ಪ, ಕ್ಷೇತ್ರ ಪ್ರಚಾರ ಸಹಾಯಕ ಮುರಳೀಧರ ಕರಭಾರಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಗ್ರಾಮೀಣ ಮಹಿಳೆಯರಿಗೆ ಆಟೋಟ ಸ್ಪರ್ಧೆ ಏರ್ಪಡಿಸಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಗ್ರಾಪಂ ಸದಸ್ಯರು, ಅಂಗನವಾಡಿ ಮೇಲ್ವಿಚಾರಕರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

