ಮೈಸೂರು

'ಜೈವಿಕ ಇಂಧನ ಕ್ರಾಂತಿ ಆಗಲಿ'

Published On :

ಹುಣಸೂರು: ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ದೇಶದಲ್ಲಿ ಜೈವಿಕ ಇಂಧನ ಕ್ರಾಂತಿ ಆಗಬೇಕಿದೆ ಎಂದು ಜಿಲ್ಲಾ ಜೈವಿಕ ಇಂಧನ ಮಾಹಿತಿ ಮತ್ತು ಪ್ರಾತ್ಯಕ್ಷಿಕ ಕೇಂದ್ರದ ನಿರ್ದೇಶಕ ಪ್ರೊ. ಶ್ಯಾಮಸುಂದರ್ ಅಭಿಪ್ರಾಯಪಟ್ಟರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಹಸಿರು ಹೊನ್ನು-ಬರಡು ಬಂಗಾರ ಯೋಜನೆಯಡಿ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ತಾಲೂಕಿನ ಗ್ರಾಪಂ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ದೇಶವು ಇಂಧನಕ್ಕಾಗಿ ಪರದೇಶವನ್ನು ಅವಲಂಬಿಸಬೇಕಿದೆ, ಇದಕ್ಕಾಗಿ ಕೋಟ್ಯಂತರ ರು. ದೇಶದ ಹಣ ಕಂಡವರ ಪಾಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಸಿಗುವ ಜೈವಿಕ ಬೆಳೆ ಬೆಳೆಯುವ ಮುಖಾಂತರ ಇಂಧನ ಕ್ಷಮತೆ ಕಾಪಾಡಬೇಕಿದೆ. ಇದಕ್ಕಾಗಿ ಜೈವಿಕ ಇಂಧನ ಉತ್ಪಾದನೆ ಬಳಕೆ ಬಗ್ಗೆ ಎನ್‌ಐಇ ವತಿಯಿಂದ ತಂತ್ರಜ್ಙಾನವನ್ನು ಅಭಿವೃದ್ಧಿಗೊಳಿಸಲಾಗಿದೆ. ಈ ಬಗ್ಗೆ ತಾಂತ್ರಿಕ ಸಲಹೆ ನೀಡಲು ತಯಾರಿದೆ ಎಂದು ತಿಳಿಸಿದರು.
ಡೀಡ್ ಸಂಸ್ಥೆಯ ಶ್ರೀಕಾಂತ್, ಪರಿವರ್ತನ ಸಂಸ್ಥೆಯ ಜಿ.ಎಸ್. ರಾಜೇಗೌಡ ಮಾತನಾಡಿದರು. ಜಿಪಂ ಯೋಜನಾಧಿಕಾರಿ ಶಂಕರರಾವ್, ಪ್ರೊ. ವೆಂಕಟರಮಣ, ಡೀಡ್‌ನ ಜಗದೀಶ್, ಗ್ರಾಪಂ ಅಧ್ಯಕ್ಷರು, ಪಿಡಿಒಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.