ಮೈಸೂರು

ವೈದ್ಯಕೀಯ ಕ್ಷೇತ್ರದಲ್ಲಿ ಪಾರದರ್ಶಕತೆ: ಪಾಟೀಲ್

Published On :

ಮೈಸೂರು: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಪಾರದರ್ಶಕತೆ ತರಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ರಾಜೇಂದ್ರ ಸಭಾಂಗಣದಲ್ಲಿ ಗುರುವಾರ ನಡೆದ 66ನೇ ರಾಷ್ಟ್ರೀಯ ಒಟೊಲ್ಯಾರಿಂಗಾಲಿಜಿಸ್ಟ್‌ಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ ಮತ್ತು ಪಾರದರ್ಶಕತೆ ತರಲು ಉದ್ದೇಶಿಸಲಾಗಿದೆ. ಅಲ್ಲದೆ ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉತ್ತೇಜನಕಾರಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ದೇಶದ ದಕ್ಷಿಣ ರಾಜ್ಯಗಳಿಗೆ ಹೋಲಿಸಿದರೆ ಉತ್ತರ ರಾಜ್ಯಗಳಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಕಡಿಮೆ ಇದೆ. ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಜೊತೆಗೆ ಖಾಸಗಿ ಕಾಲೇಜುಗಳು ಹೆಚ್ಚು ಗುಣಮಟ್ಟದಿಂದ ಕೆಲಸ ಮಾಡುತ್ತಿವೆ ಎಂದರು.
ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನಲ್ಲಿ ಆಯೋಜಿಸಿರುವ ಈ ಸಮ್ಮೇಳನವು ತಮ್ಮ ಜ್ಞಾನ ಮಟ್ಟವನ್ನು ಉತ್ತಮೀಕರಿಸಲು ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಇಲ್ಲಿ ನಡೆಯುವ ಚರ್ಚೆಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಅವರು ಆಶಿಸಿದರು.
ಎಒಐನ ನಿರ್ಗಮಿತ ಅಧ್ಯಕ್ಷ ಡಾ.ಎಂ.ಕೆ. ತನೇಜಾ ಅವರು 2014ನೇ ಸಾಲಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಸುಧಾಕರ್ ವೈದ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಡಾ.ಮಿಲಿನ ವಸಂತ್ ಕಿಂಕೆನೆ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ.ಎಚ್. ಬಸವನಗೌಡಪ್ಪ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಒಐ ಗೌರವ ಕಾರ್ಯದರ್ಶಿ ಡಾ.ರಾಕೇಶ್ ಗುಪ್ತ, ಡಾ.ಎಲ್.ಎನ್. ನಮ್ದೇವ್, ಸಂಘಟನಾ ಕಾರ್ಯದರ್ಶಿ ಡಾ.ಎಂ.ಬಿ. ಭಾರತಿ, ಜೆಎಸ್‌ಎಸ್ ಕುಲಸಚಿವರಾದ ಮಂಜುನಾಥ್ ಮತ್ತು ವಿಜಯಸಿಂಹ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.