ಮೈಸೂರು

ಸಿಐಡಿ- ವಿಶೇಷ ಘಟಕಗಳ ಕ್ರೀಡಾಕೂಟ ಆರಂಭ

Published On :

ಮೈಸೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿಐಡಿ, ತರಬೇತಿ ಮತ್ತು ವಿಶೇಷ ಘಟಕಗಳ 2013ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಇದೇ ಮೊದಲ ಬಾರಿಗೆ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ ಆಯೋಜಿಸಿದೆ.
ಈ ಕ್ರೀಡಾಕೂಟವನ್ನು ಗುರುವಾರ ಬೆಳಗ್ಗೆ ಉದ್ಘಾಟಿಸಿದ ನಿವೃತ್ತ ಡಿಜಿಪಿ ಎ.ಆರ್. ಇನ್‌ಫೆಂಟ್ ಮಾತನಾಡಿ, ಸಿಐಡಿ ಮತ್ತು ವಿಶೇಷ ಘಟಕಗಳ ಈ ಕ್ರೀಡಾಕೂಟವು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿತ್ತು. ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.
ಕ್ರೀಡೆಗಳಲ್ಲಿ ಸೋಲು- ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ಕ್ರೀಡೆಯಿಂದ ಶಿಸ್ತು ರೂಢಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ವಿವಿಧ ಘಟಕಗಳು ಭಾಗಿ: ಸಿಐಡಿ, ಅರಣ್ಯ ಘಟಕ, ರೇಲ್ವೆ, ವೈರ್‌ಲೆಸ್, ತಾಂತ್ರಿಕ ಘಟಕ, ರಾಜ್ಯ ಗುಪ್ತವಾರ್ತೆ, ಕರ್ನಾಟಕ ಪೊಲೀಸ್ ಅಕಾಡೆಮಿ, ಕೆಪಿಟಿಸಿಎಲ್ ಮತ್ತು ಇತರೆ ಘಟಕಗಳಿಂದ 1 ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಿದ್ದಾರೆ.
ವಿವಿಧ ಓಟದ ಸ್ಫರ್ಧೆ, ಡಿಸ್ಕಸ್ ಎಸೆತ, ಜಾವಲಿನ್ ಎಸೆತ, ಉದ್ದ ಜಿಗಿತ, ಎತ್ತರ ಜಿಗಿತ, ತಂಡ ಕ್ರೀಡೆಗಳಾದ ಕ್ರಿಕೆಟ್, ವಾಲಿಬಾಲ್, ಕಬಡ್ಡಿ, ಟಿನ್ನಿಸ್, ಬ್ಯಾಡ್ಮಿಂಟನ್ ಮತ್ತು ಇತರೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅಲ್ಲದೆ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಬಂದೂಕು ಹಾಗೂ ರಿವಾಲ್ವರ್ ಶೂಟಿಂಗ್ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಸಿಐಡಿ ಡಿಜಿಪಿ ಬಿಪಿನ್ ಗೋಪಾಲಕೃಷ್ಣ, ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಪಿ.ಕೆ. ಗರ್ಗ್ ಇದ್ದರು.
ಇಂದು ಸಮಾರೋಪ: ಜ.10ರ ಸಂಜೆ 4ಕ್ಕೆ ಈ ಕ್ರೀಡಾ ಕೂಟದ ಮುಕ್ತಾಯ ಸಮಾರಂಭ ನಡೆಯಲಿದ್ದು, ನಿವೃತ್ತ ಡಿಜಿಪಿ ವಿ.ವಿ. ಭಾಸ್ಕರ್, ಡಿಜಿಪಿ (ತರಬೇತಿ) ಸುಶಾಂತ್ ಮಹಾಪಾತ್ರ ಅವರು ಅತಿಥಿಗಳಾಗಿ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.