ಡಿಸಿಸಿ ಬ್ಯಾಂಕ್‌ಗೆ ಶಂಕರೇಗೌಡ ನಾಮನಿರ್ದೇಶನ ರದ್ದು
ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಗೆ ಅಪೆಕ್ಸ್ ಬ್ಯಾಂಕಿನ ಪ್ರತಿನಿಧಿಯಾಗಿ ವೈ.ಎನ್. ಶಂಕರೇಗೌಡ ಅವರನ್ನು ನಾಮನಿರ್ದೇಶನ ಮಾಡಿದ್ದನ್ನು ರದ್ದುಪಡಿಸಲಾಗಿದೆ.
ಶಂಕರೇಗೌಡ ಅವರು ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ಬೆಂಬಲಿಗರು. ನವೆಂಬರ್‌ನಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಅವರು ಸಿ.ಬಸವೇಗೌಡರ ವಿರುದ್ಧ ಸ್ಪರ್ಧಿಸಿ, ಪರಾಭವಗೊಂಡಿದ್ದರು. ನಂತರ ಸಹಕಾರ ಸಚಿವರು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಿಗೆ ಪತ್ರ ಬರೆದು, ವೈ.ಎನ್. ಶಂಕರೇಗೌಡ ಅವರನ್ನು ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡುವಂತೆ ಕೋರಿದ್ದರು.
ಅದರಂತೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಬಿ.ವಿ. ಶೇಷಾದ್ರಿ ಅವರ ನಾಮನಿರ್ದೇಶನವನ್ನು ವಾಪಸ್ ಪಡೆದು, ಆ ಜಾಗದಲ್ಲಿ ವೈ.ಎನ್. ಶಂಕರೇಗೌಡರನ್ನು ನಾಮನಿರ್ದೇಶನ ಮಾಡಿದ್ಜರು.
ನ.30 ರಂದು ನಡೆದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೂರು ಬಾರಿ ಅಧ್ಯಕ್ಷರಾಗಿದ್ದ ಹಾಗೂ ಹಾಲಿ ಕಾಂಗ್ರೆಸ್‌ನಲ್ಲಿರುವ ಸಿ.ಬಸವೇಗೌಡ ಸ್ಪರ್ಧಿಸಿದ್ದರು. ಆದರೆ ಸಹಕಾರ ಸಚಿವರ ಒತ್ತಾಸೆ ಮೇರೆಗೆ ಹನೂರು ಶಾಸಕ ಕಾಂಗ್ರೆಸ್‌ನ ಆರ್.ನರೇಂದ್ರ ಸ್ಪರ್ಧಿಸಿದ್ದರು. ವೈ.ಎನ್. ಶಂಕರೇಗೌಡ ಸೇರಿದಂತೆ ಕಾಂಗ್ರೆಸ್‌ನ ಒಂದು ಬಣ ಮತ್ತು ಜೆಡಿಎಸ್‌ನ ಮೂವರು ನರೇಂದ್ರ ಅವರನ್ನು ಬೆಂಬಲಿಸಿದ್ದರಿಂದ ಬಸವೇಗೌಡ ಪರಾಭವಗೊಂಡಿದ್ದರು. ಬಸವೇಗೌಡರ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್, ಸಂಸದ ಎಚ್. ವಿಶ್ವನಾಥ್ ಇದ್ದರು.
ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಎಸ್. ಚಂದ್ರಶೇಖರ್ ಆಯ್ಕೆಯಾಗಿದ್ದರು. ಕಾನೂನುಬಾಹಿರ ನಾಮನಿರ್ದೇಶನದ ವಿರುದ್ಧ ರಾಜ್ಯ ಸಹಕಾರ ಚುನಾವಣಾ ಆಯೋಗದ ಆಯುಕ್ತ ಎನ್.ಸಿ. ಮುನಿಯಪ್ಪ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಅವರೂ ಸೇರಿದಂತೆ ರಾಜ್ಯದ ಎಲ್ಲಾ ಡಿಸಿಸಿ ಬ್ಯಾಂಕ್‌ಗಳ ಆಡಳಿತ ಮಂಡಳಿಗೆ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರ/ ಪ್ರತಿನಿಧಿಗಳನ್ನು ನಾಮಕರಣ ಮಾಡಿರುವುದನ್ನು ಹಿಂಪಡೆಯಲಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ಮುಖ್ಯ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

