ಮೈಸೂರು

ಮಕ್ಕಳು ದೇಶದ ಸಂಪತ್ತು: ಮೇಯರ್ ರಾಜೇಶ್ವರಿ

Published On :

ಮೈಸೂರು: ಮಕ್ಕಳು ದೇಶದ ಸಂಪತ್ತು ಎಂದು ಮೇಯರ್ ಎನ್.ಎಂ. ರಾಜೇಶ್ವರಿ ಹೇಳಿದರು.
ವೈಶಾಲಿ ಶಿಕ್ಷಣ ಸಂಸ್ಥೆಯು ಜಗನ್ಮೋಹನ ಅರಮನೆಯಲ್ಲಿ ಮಂಗಳವಾರ ಏರ್ಪಡಿಸಿದ್ದ 35ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ದಿಸೆಯಲ್ಲಿ ವ್ಯಾಸಂಗ ಸಮಯದಲ್ಲಿ ಸೋಮಾರಿಗಳಾಗದೆ ಪರಿಶ್ರಮ ವಹಿಸಿ ವಿದ್ಯೆ ಕಲಿಯಬೇಕು. ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಪೋಷಕರು ಹಾಗೂ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು. ಪಠ್ಯದ ಜತೆಗೆ ವ್ಯಕ್ತಿತ್ವ ವಿಕಾಸಕ್ಕೆ  ಪೂರಕವಾದ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದರು.
ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆ ತೋರಿರುವ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.
ನಗರ ಪಾಲಿಕೆ ಸದಸ್ಯೆ ಸಿ.ಎಸ್. ರಜನಿ ಅಣ್ಣಯ್ಯ, ಆದರ್ಶ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜಯಲಕ್ಷ್ಮೀ ಮುಖ್ಯ ಅತಿಥಿಯಾಗಿದ್ದರು. ಶಿಕ್ಷಕಿಯರಾದ ನಂದಿನಿ ಸ್ವಾಗತಿಸಿದರು. ವನಿತಾ ವರದಿ ಮಂಡಿಸಿದರು. ನಂತರ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಸಿದ್ಧಾರ್ಥನಗರ, ಕುಂಬಾರ ಕೊಪ್ಪಲು, ಮಂಚೇಗೌಡನ ಕೊಪ್ಪಲು ಹಾಗೂ ಜಯನಗರದಲ್ಲಿರುವ ವೈಶಾಲಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.