'ಉಳ್ಳವರು ಇತರರಿಗೆ ಸಹಾಯ ಮಾಡಿ'
ಕೆ.ಆರ್. ನಗರ: ಸಮಾಜದಲ್ಲಿ ಉಳ್ಳವರು ಇತರರಿಗೆ ಸಹಾಯ ಮಾಡಿ, ತುಳಿತಕ್ಕೆ ಒಳಗಾದವರು ಮುಖ್ಯವಾಹಿನಿಗೆ ಬರಲು ಸಹಕಾರ ನೀಡಬೇಕೆಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ಕಂಠೇನಹಳ್ಳಿ ಮಹಾಗಣಪತಿ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಪ್ರಗತಿಬಂಧು ಸ್ವ-ಸಹಾಯ ಸಂಘ ಒಕ್ಕೂಟಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘಗಳಲ್ಲಿ ಮತ್ತು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಅಭಿವೃದ್ಧಿ ಹೊಂದಬಹುದು ಎಂದು ತಿಳಿಸಿದರು.
ತಾಲೂಕು ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಂಘದ ಕಾರ್ಯ ಚಟುವಟುಕೆಗಳ ಜತೆಗೆ ಗುಡಿ ಕೈಗಾರಿಕೆ, ತೋಟಗಾರಿಕಾ ವೃತ್ತಿ ಸೇರಿದಂತೆ ಇತರೆ ಉಪ ಕಸುಬುಗಳನ್ನು ಕೈಗೊಳ್ಳಬೇಕೆಂದು ಕಿವಿಮಾತು ಹೇಳಿದರು.
ತಾಲೂಕು ಯೋಜನಾಧಿಕಾರಿ ಬಿ.ಅಶೋಕ್ ಸಂಸ್ಥೆಯ ಕಾರ್ಯವಿಧಾನ ಮತ್ತು ಸಾಧನೆಗಳನ್ನು ವಿವರಿಸಿದರು.
ಪುರಸಭಾ ಸದಸ್ಯರಾದ ಎಚ್.ಸಿ. ರಾಜು. ಎನ್.ಎನ್. ಶಿವಕುಮಾರ್, ನಂಜುಂಡ, ಮಾಜಿ ಸದಸ್ಯರಾದ ಶಂಕರ್, ಕೆ.ಎಸ್. ರೇವಣ್ಣ, ಸೇವಾ ಪ್ರತಿನಿಧಿಗಳಾದ ಮಂಜುಳಾ, ಜ್ಯೋತಿ, ಗೀತಾ, ಭವಾನಿ, ರೇಷ್ಮಾ, ಶೋಭಾ, ತಿಪ್ಪೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

