ಬಹುರೂಪಿ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಿ
ಮೈಸೂರು: ರಂಗಾಯಣ ಆಯೋಜಿಸುತ್ತಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಯಶಸ್ಸಿಗೆ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರು ಪೂರೈಕೆ ಮಾಡುವುದು, ಕಲಾಮಂದಿರದ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು, ಸಾರ್ವಜನಿಕರ ಅನುಕೂಲಕ್ಕೆ ಕಸದ ಡಬ್ಬ ಇರಿಸುವುದು ಹಾಗೂ ಹಬ್ಬ ನಡೆಯುವ ದಿನದಂದು ಸಂಜೆ ಹೊತ್ತಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಧೂಮೀಕರಣ ಮಾಡುವ ಬಗ್ಗೆ ಸಲಹೆ ನೀಡಿದರು.
ಬೇರೆಡೆಯಿಂದ ಮೈಸೂರಿಗೆ ಆಗಮಿಸುವ ಕಲಾವಿದರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಅವರಿಗೆ ಸೂಕ್ತ ವಾಹನ ಸೌಲಭ್ಯ, ವಸತಿ ವ್ಯವಸ್ಥೆ ಮಾಡುವುದು. ಕಲಾಮಂದಿರದ ಆವರಣದಲ್ಲಿ ಕೆಟ್ಟು ಹೋಗಿರುವ ಬೀದಿ ದೀಪಗಳನ್ನು ದುರಸ್ತಿಗೊಳಿಸಿ ಬೆಳಗಿಸುವುದು. ಕಲಾಮಂದಿರ, ರಂಗಾಯಣಕ್ಕೆ ದೀಪಾಲಂಕಾರ ಮಾಡಿ ಕಂಗೊಳಿಸುವಂತೆ ಮಾಡಬೇಕು. ಬಹುರೂಪಿ ನಡೆಯುವ ದಿನಗಳಲ್ಲಿ ಒಂದು ಪಕ್ಷ ವಿದ್ಯುತ್ ಕೈ ಕೊಟ್ಟರೆ ಬದಲಿ ವ್ಯವಸ್ಥೆಯಾಗಿ ಜನರೇಟರ್ ಒದಗಿಸುವ ಬಗ್ಗೆ ಸೆಸ್ಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ವಿವಿಧೆಡೆಯಿಂದ ಸಾರ್ವಜನಿಕರು ನಾಟಕೋತ್ಸವಕ್ಕೆ ಸಕಾಲಕ್ಕೆ ಬರಲು ಸಾರಿಗೆ ಇಲಾಖೆ ಅಧಿಕಾರಿಗಳು ಬಸ್ ಸೌಕರ್ಯ ಒದಗಿಸಬೇಕು. ಕಲಾವಿದರಿಗಾಗಿ ಮಿನಿ ಬಸ್ ಸೇವೆ ಒದಗಿಸಬೇಕು. ರಂಗಾಯಣದ ಗೇಟಿನ ಮುಂಭಾಗದ ವಾಹನ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು. ಹಾಗೆ ಉತ್ಸವದ ಉದ್ದಕ್ಕೂ ಶಿಸ್ತು ಪಾಲಿಸುವ ಸಲುವಾಗಿ ಪೊಲೀಸ್ ಇಲಾಖೆ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಸಿ.ಶಿಖಾ, ರಂಗಾಯಣ ನಿರ್ದೇಶಕ ಎಚ್. ಜನಾರ್ದನ್, ಪಾಲಿಕೆ ಆಯುಕ್ತ ಪಿ.ಜಿ. ರಮೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

