ಮೈಸೂರು

ಕಲಿಕೋತ್ಸವ ವಿದ್ಯಾರ್ಥಿಗಳಿಗೆ ಸಹಕಾರಿ

Published On :

ಹುಣಸೂರು: ಸರ್ಕಾರಿ ಶಾಲಾ ಮಕ್ಕಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಪೂರಕವಾದ ಕಲಿಕೋತ್ಸವವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲಿದೆ ಎಂದು ಶಾಸಕ ಎಚ್.ಪಿ. ಮಂಜುನಾಥ್ ಅಭಿಪ್ರಾಯಪಟ್ಟರು. ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲೂಕು ಮಟ್ಟದ ಕಲಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಒಂದೆಡೆ ಪ್ರತಿಭಾ ಕಾರಂಜಿಯಿಂದ ಮಕ್ಕಳ ಪ್ರತಿಭೆ ಅನಾವರಣ ಆಗುತ್ತದೆ. ಮತ್ತೊಂದೆಡೆ ಪಠ್ಯಕ್ಕೆ ಸಂಬಂಧಿಸಿದ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಕಲಿಕೋತ್ಸವ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದೆ. ತಾಲೂಕಿನಲ್ಲಿ ಖಾಸಗಿ ಶಾಲೆಗಳನ್ನು ಮೀರಿಸುವ ಹಲವಾರು ಸರ್ಕಾರಿ ಶಾಲೆಗಳು ಇವೆ. ಆದರೆ ಕೆಲವು ಪ್ರೌಢಶಾಲೆ ಮಕ್ಕಳಿಗೆ ಕನ್ನಡ ಓದಲು- ಬರೆಯಲು ಬಾರದಿರುವುದು ನೋವಿನ ಸಂಗತಿ ಎಂದರು. ಇನ್ನು ಮುಂದೆ ಮಕ್ಕಳ ಕಾರ್ಯಕ್ರಮಗಳಲ್ಲಿ ಗಣ್ಯರನ್ನು ಕೆಳಗೆ ಕೂರಿಸಿ ಮಕ್ಕಳಿಗೆ ವೇದಿಕೆ ಮೀಸಲಿಡುವಂತೆ ಸೂಚಿಸಿದರು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಜೊತೆಗೆ ಉತ್ತಮ ಶಿಕ್ಷಕರಿಗೂ ನಗದು ಬಹುಮಾನ ನೀಡುವುದಾಗಿ ತಿಳಿಸಿದರು. ಜಿಪಂ ಸದಸ್ಯರಾದ ಡಾ.ಪುಷ್ಪ ಅಮರನಾಥ್, ರಮೇಶ್, ತಾಪಂ ಅಧ್ಯಕ್ಷೆ ದೇವಕಿ ತಿಮ್ಮನಾಯ್ಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವರದರಾಜು, ಬಿಇಒ ರಾಜಶೇಖರ್, ಬಿಆರ್‌ಸಿ ಮಂಗಳ, ತದೇವರಾಜೇಗೌಡ, ಚಿನ್ನವೀರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.