ಲೈಂಗಿಕ ಶಿಕ್ಷಣದಿಂದ ಏಡ್ಸ್ ನಿಯಂತ್ರಣ ಸಾಧ್ಯ
ಮೈಸೂರು: ಯುವಕರಲ್ಲಿ ಏಡ್ಸ್ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ. ಲೈಂಗಿಕ ಶಿಕ್ಷಣದಿಂದಷ್ಟೇ ಏಡ್ಸ್ ನಿಯಂತ್ರಣ ಸಾಧ್ಯ ಎಂದು ಜೆಎಸ್‌ಎಸ್ ಆಸ್ಪತ್ರೆ ಮನೋವೈದ್ಯ ಡಾ.ಟಿ.ಎಸ್. ಸತ್ಯನಾರಾಯಣರಾವ್ ಹೇಳಿದರು.
ಕರ್ನಾಟಕ ಏಡ್ಸ್ ನಿಯಂತ್ರಣ ಸೊಸೈಟಿ ಸಹಯೋಗದಲ್ಲಿ ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಮತ್ತು ಜೆಎಸ್‌ಎಸ್ ಪದವಿ ಪೂರ್ವ ಕಾಲೇಜು ಸೋಮವಾರ ಏರ್ಪಡಿಸಿದ್ದ ರೆಡ್ ರಿಬ್ಬನ್ ಕ್ಲಬ್‌ನ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ವಯೋ ಸಹಜ ಕುತೂಹಲ ಏಡ್ಸ್ ರೋಗಕ್ಕೆ ಕಾರಣವಾಗುತ್ತಿದೆ. ಯುವಕರಿಗೆ ಲೈಂಗಿಕ ಶಿಕ್ಷಣ ನೀಡಿ, ಅಡ್ಡ ದಾರಿ ಹಿಡಿಯುವುದನ್ನು ತಪ್ಪಿಸಬೇಕು ಎಂದು ಅವರು ಸಲಹೆ ನೀಡಿದರು.
ಏಡ್ಸ್ ಕುರಿತು ಹಲವರಲ್ಲಿ ತಪ್ಪು ತಿಳಿವಳಿಕೆ ಇದೆ. ಎಚ್‌ಐವಿ ಪೀಡಿತ ಮಹಿಳೆ ಗರ್ಭ ಧರಿಸಿದಾಗ ಮಗುವಿಗೆ ಏಡ್ಸ್ ಬರುವ ಸಾಧ್ಯತೆ ಹೆಚ್ಚು. ಇಂಜೆಕ್ಷನ್ ಸಿರಿಂಜ್ ಉಪಯೋಗಿಸುವಾಗಲೂ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದರು.
ಎಚ್ಚರಿಕೆ ವಹಿಸಿ: ಏಡ್ಸ್ ಬಂದರೆ ಭಯ ಪಡಬೇಕಿಲ್ಲ. ಬದಲಿಗೆ ಸೂಕ್ತ ಚಿಕಿತ್ಸೆ ಪಡೆಯಬೇಕು. ಏಡ್ಸ್‌ಗೆ ಶಾಶ್ವತ ಚಿಕಿತ್ಸೆ ಇಲ್ಲವಾದರೂ ಕಾಯಿಲೆ ಮುಂದೂಡಬಹುದು. ಆದರೆ ಕಾಯಿಲೆ ಬರುವ ಮುನ್ನ ಎಚ್ಚರಿಕೆ ವಹಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
ಏಡ್ಸ್ ಕುರಿತ ಚರ್ಚಾಸ್ಪರ್ಧೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜೆಎಸ್‌ಎಸ್ ಪಿಯು ಕಾಲೇಜು ಪ್ರಾಂಶುಪಾಲ ಎಸ್. ಸೋಮಶೇಖರ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ.ಬಿ. ಮಲ್ಲಿಕಾರ್ಜುನ ಪಂಡಿತ್, ಪ್ರಾಧ್ಯಾಪಕ ಬಿ. ಪ್ರಭುಸ್ವಾಮಿ, ಉಪನ್ಯಾಸಕ ಎನ್.ಸಿ. ನಾಗರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

