ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ
ಕ.ಪ್ರ.ವಾರ್ತೆ , ಎಚ್.ಡಿ.ಕೋಟೆ , ಜ.13
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ಶಾಸಕ ಎಸ್. ಚಿಕ್ಕಮಾದು ವಿಷಾದಿಸಿದರು.
ಪಟ್ಟಣದ ಹುಣಸೂರು-ಬೇಗೂರು ರಸ್ತೆಯ ವಿಶ್ವಭಾರತಿ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟದ ಕಲಿಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹಿಂದೆ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸಲು ಕಠಿಣ ಶ್ರಮ ಪಡಬೇಕಾಗಿತ್ತು. ಆದರೆ ಇಂದು ಮಕ್ಕಳಿಗೆ ಸುಲಭ ರೀತಿಯಲ್ಲಿ ವಿದ್ಯಾಭ್ಯಾಸಕ್ಕೆ ಸರ್ಕಾರವು ವಿವಿಧ ಹೊಸ ಯೋಜನೆಗಳನ್ನು ಮಕ್ಕಳ ಬುದ್ಧಿಶಕ್ತಿಗಳಿಗೆ ಅನುಗುಣವಾಗಿ ಜಾರಿಗೆ ತಂದಿದೆ. ಸರ್ಕಾರವು ಕಡ್ಡಾಯ ಶಿಕ್ಷಣ ಜಾರಿಗೆ ತಂದಿದೆ. ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಹಾಜರಾತಿಯ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ. ರಾಜ್ಯ ಸರ್ಕಾರವು ಹೊಸದಾಗಿ ಪ್ರತಿಯೊಂದು ಹೆಣ್ಣು ಮಗುವಿಗೆ ಪ್ರತಿ ದಿನದ ಹಾಜರಾತಿಗೆ 2 ನೀಡುವುದಾಗಿ ತಿಳಿಸಿದೆ. 2013-14ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶವು ದೊರಕುವಂತೆ ತಾಲೂಕಿನ ಶಿಕ್ಷಕರು ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿ,
ಉತ್ತಮ ಫಲಿತಾಂಶ ಲಭ್ಯವಾದರೆ ತಾಲೂಕಿನ ಪ್ರೌಢಶಾಲೆಯ ಶಿಕ್ಷಕರನ್ನು ಗೌರವಿಸುವುದಾಗಿ ತಿಳಿಸಿದರು.
ಜಿಪಂ ಪ್ರತಿಪಕ್ಷದ ನಾಯಕ ಚಿಕ್ಕಣ್ಣೇಗೌಡ ಸಮಾರಂಭಕ್ಕೆ ಚಾಲನೆ ನೀಡಿದರು. ಶಿಕ್ಷಣ ಇಲಾಖೆಯ ಮಹದೇವಯ್ಯ ಮಾತನಾಡಿದರು. ಜಿಪಂ ಸದಸ್ಯರಾದ ಎಚ್.ಸಿ. ಮಂಜುನಾಥ್, ಪದ್ಮಾ ಬಸವರಾಜು, ಪಪಂ ಸದಸ್ಯರಾದ ಎಚ್.ಸಿ. ನರಸಿಂಹಮೂರ್ತಿ, ರಾಜಣ್ಣ, ಬಿಇಒ ಉದಯಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ರಂಗಸ್ವಾಮಿ ಶೆಟ್ಟಿ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ತಿರುಮಲಾಚಾರ್, ಕಾರ್ಯದರ್ಶಿ ಉಮಾಶಂಕರ್, ಲಿಂಗಣ್ಣ, ತಾಲೂಕು ಶಿಕ್ಷಕರ ಸಂಘದ ಪದಾಧಿಕಾರಿಗಳಾದ ನಾಗರಾಜು, ಸತೀಶ್, ಮಹದೇವಯ್ಯ, ಮಂಜುನಾಥ್, ಸೋಮಶೇಖರ್, ಸೋಮಸುಂದರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಂಜು ಕೋಟೆ, ಶಿಕ್ಷಕರು, ತಾಲೂಕು ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

