ಅರಣ್ಯ ಹಕ್ಕಿಗಾಗಿ 30ರಂದು ಪ್ರತಿಭಟನೆ
ಹುಣಸೂರು: ಆದಿವಾಸಿ ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಒತ್ತಾಯಿಸಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಜ.30 ರಂದು ಪ್ರತಿಭಟಿಸಲು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಜಿಲ್ಲಾ ಘಟಕ ತೀರ್ಮಾನಿಸಿದೆ.
ಸಹಕಾರ ಭವನದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಸಮಿತಿ ಪದಾಧಿಕಾರಿಗಳು, ಆದಿವಾಸಿ ಅರಣ್ಯ ಹಕ್ಕು ಕಾಯ್ದೆ ಜಾರಿಯಲ್ಲಿದ್ದು, ಅನುಷ್ಠಾನ ಮಾಡುವ ವೇಳೆ ಜಿಲ್ಲಾಡಳಿತ ನಿಷ್ಕ್ರಿಯವಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು, ನಂಜನಗೂಡು, ಎಚ್.ಡಿ. ಕೋಟೆ, ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕಿನಲ್ಲಿ ಜ.30 ರಂದು ಪ್ರತಿಭಟಿಸಲು ಸಭೆ ತೀರ್ಮಾನಿಸಿದೆ.
ಆಶ್ರಮ ಶಾಲೆಗಳಲ್ಲಿ ಶೌಚಾಲಯ, ನೀರಿನ ವ್ಯವಸ್ಥೆ, ವಸತಿ ವ್ಯವಸ್ಥೆ, ಊಟದ ವ್ಯವಸ್ಥೆ, ನೌಕರರಿಗೆ ಸಂಬಳ ಸಿಕ್ಕದಿರುವುದು, ಪ್ರತಿಷ್ಠಿತ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ 2 ವರ್ಷ ಕಳೆದರೂ ಸಮವಸ್ತ್ರ, ಶೂ, ಪೆನ್ನು, ಪುಸ್ತಕ, ಶಾಲಾ ಶುಲ್ಕ, ವಾಹನ ವ್ಯವಸ್ಥೆ ಮಾಡದಿರುವುದು, ಆದಿವಾಸಿ ಹಾಡಿಗೆ ಮೂಲ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ ಪರಿಷತ್ ಈ ಪ್ರತಿಭಟನೆ ನಡೆಸುತ್ತಿದೆ.
ಸಭೆಯಲ್ಲಿ ರಾಜ್ಯ ಆದಿವಾಸಿ ರಕ್ಷಣಾ ಪರಿಷತ್ನ ಪ್ರಧಾನ ಕಾರ್ಯದರ್ಶಿ ಎಂ. ಕೃಷ್ಣಯ್ಯ, ಸಂಘಟನಾ ಕಾರ್ಯದರ್ಶಿ ಬಿ. ಕಾವೇರ, ಗೌರವಾಧ್ಯಕ್ಷ ಕಾಳಯ್ಯ, ಜಿಲ್ಲಾಧ್ಯಕ್ಷ ವಿಜಯಕುಮಾರ್, ಶಿವಲಿಂಗಯ್ಯ, ವೆಂಕಟೇಶ್, ನಂಜನಗೂಡು ತಾಲೂಕು ಘಟಕದ ಅಧ್ಯಕ್ಷೆ ಸುಭಾಷಿಣಿ, ಮೈಸೂರು ತಾಲೂಕು ಸಂಘಟನಾ ಕಾರ್ಯದರ್ಶಿ ಸೋಮಶೇಖರ್, ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್, ಟಿ.ಸಿ. ಸುರೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

