ವಿದ್ಯಾರ್ಥಿಗಳ ಕಲಿಕೋತ್ಸವ ಕಾರ್ಯಕ್ರಮ ಉಪಯುಕ್ತ: ರೇವಣ್ಣ
ಪಿರಿಯಾಪಟ್ಟಣ: ಕಲಿಕೋತ್ಸವ ಎಂಬ ಹೊಸ ಚಿಂತನೆಯುಳ್ಳ ಕಾರ್ಯಕ್ರಮ ಇತರೆ ಕಾರ್ಯಕ್ರಮಗಳಿಗಿಂತ ಹೆಚ್ಚು ಉಪಯುಕ್ತವಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ರೇವಣ್ಣ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಲಿಕೋತ್ಸವವು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತ ಕಾರ್ಯಕ್ರಮವಾಗಿದೆ. ಪ್ರತಿಭಾ ಕಾರಂಜಿಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶವಿತ್ತು. ಆದರೆ ಕಲಿಕೋತ್ಸವದಲ್ಲಿ ಕಲಿಕೆಯ ಬಗ್ಗೆ ದೃಢಪಡಿಸುವ ಕಾರ್ಯಕ್ರಮವಿದೆ ಎಂದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜ್ಕುಮಾರ್ ಮಾತನಾಡಿದರು. ಕಾಲೇಜಿನ ಉಪಪ್ರಾಂಶುಪಾಲ ನಾಗಶೆಟ್ಟಿ, ಎಸ್ಡಿಎಂಸಿ ಅಧ್ಯಕ್ಷ ಮೋಹನ್ರಾಜ್, ಶಿಕ್ಷಣ ಸಂಯೋಜಕ ಶಿವಣ್ಣ, ಬಿಆರ್ಪಿಗಳಾದ ತಾಂಡವಮೂರ್ತಿ, ರವಿಕುಮಾರ್, ಇ.ಬಿ. ವೆಂಕಟೇಶ್, ಸಿಆರ್ಪಿಗಳಾದ ಶ್ರೀಕಾಂತ್, ಮೂರ್ತಿ, ಶಿವಶಂಕರ್, ಸೋಮಶೇಖರ್, ಜಯಣ್ಣ, ಶಿವು, ರಮೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಸ್. ದಯಾನಂದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

