ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ
ಮೈಸೂರು: ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಅತಿಥಿಗೃಹದಲ್ಲಿ ಮಂಗಳವಾರ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಈಗಾಗಲೇ ಅಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿದ್ದಾರೆ. ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು, ಲೋಕೋಪಯೋಗಿ ಸಚಿವರು, ಲೋಕಸಭಾ ಸದಸ್ಯರು, ಸ್ಥಳೀಯ ಶಾಸಕರು, ಇನ್ನಿತರ ಜನಪ್ರತಿನಿಧಿಗಳು, ಮುಖಂಡರು ಹಾಗೂ ಅಧಿಕಾರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ನಂತರ ಸಭೆ ನಡೆಸಿ, ಸಮಗ್ರ ಅಭಿವೃದ್ಧಿಯ ಬಗ್ಗೆ ಪೂರ್ಣ ವರದಿ ಸಲ್ಲಿಸುವಂತೆ ತಿಳಿಸಿದರು.
ದೇವಸ್ಥಾನದ ಬಳಿ ಸರಿಯಾಗಿ ಕಸ ವಿಲೇವಾರಿಯಾಗುತ್ತಿಲ್ಲ ಎಂದು ಸಭೆಯಲ್ಲಿ ಹಾಜರಿದ್ದ ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದಾಗ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ದೇವಸ್ಥಾನದ ಸುತ್ತವಿರುವ ಕಸವನ್ನು ಪ್ರತಿದಿನ ವಿಲೇವಾರಿ ಮಾಡಲು ನಗರ ಪಾಲಿಕೆಯವರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಕಾಮಗಾರಿಗೆ ಕ್ರಿಯಾಯೋಜನೆ: ಜಿಲ್ಲಾಧಿಕಾರಿ ಸಿ. ಶಿಖಾ ಮಾತನಾಡಿ, ದೇವಸ್ಥಾನ ಅಭಿವೃದ್ಧಿಗಾಗಿ ಅಂದಾಜು 37 ಕೋಟಿಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಿದೆ. ಚಾಮುಂಡಿಬೆಟ್ಟದಲ್ಲಿ 8 ಎಕರೆ ಭೂಮಿಯನ್ನು ಗುರುತಿಸಿದ್ದು, ಈ ಸ್ಥಳದಲ್ಲಿ 20 ಕೋಟಿ ವೆಚ್ಚದಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್, ಡಾರ್ಮೆಟರಿ, ಶೌಚಾಲಯಗಳು, 100 ಅಂಗಡಿಗಳ ಮಳಿಗೆಗಳನ್ನು ನಿರ್ಮಿಸಲಾಗುವುದು. 1.50 ಕೋಟಿ ರು. ವೆಚ್ಚದಲ್ಲಿ ದೇವಿಕೆರೆಯನ್ನು ದುರಸ್ತಿ ಕೆಲಸ ಹಾಗೂ ವಿದ್ಯುದ್ದೀಕರಣಗೊಳಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಒಂದು ಕೋಟಿ ರು. ವೆಚ್ಚದಲ್ಲಿ 100 ನೇರ ಪ್ರವೇಶ, 30 ವಿಶೇಷ ಪ್ರವೇಶ ಹಾಗೂ ಉಚಿತ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಮಹಾದ್ವಾರದಲ್ಲಿಯೇ ಪ್ರತ್ಯೇಕ ಪ್ರವೇಶ ಕಲ್ಪಿಸಲು ಸ್ಟೈನ್ಲೆಸ್ ಸ್ಟೀಲ್ ರೈಲಿಂಗ್ಸ್ಗಳನ್ನು ಆಳವಡಿಸುವ ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಿದೆ ಎಂದು ಸಭೆಗೆ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

