ನೀರು ಒದಗಿಸಲು ಜಿಟಿಡಿ ಸೂಚನೆ
ಕ.ಪ್ರ.ವಾರ್ತೆ , ಮೈಸೂರು , ಜ. 14
ಒಂದು ವಾರದೊಳಗೆ ಸಮರ್ಪಕ ನೀರು ಒದಗಿಸುವಂತೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಜಸ್ಕೋ, ವಾಣಿ ವಿಲಾಸ ಹಾಗೂ ನರ್ಮ್ ಅಧಿಕಾರಿಗಳಿಗೆ ಸೂಚಿಸಿದರು.
ಜನತಾ ನಗರಕ್ಕೆ ಮಂಗಳವಾರ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಿ, ಕುಂದು ಕೊರತೆ ವಿಚಾರಿಸಿದ ಅವರು, ಸ್ಥಳದಲ್ಲಿಯೇ ಹಾಜರಿದ್ದ ಅಧಿಕಾರಿಗಳಿಗೆ ಕೂಡಲೇ ಜನತಾ ನಗರಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಕಪಿಲಾ ನೀರಿನ ಸಂಪರ್ಕ ನೀಡುವಂತೆ ತಿಳಿಸಿದರು.
ಜನತಾ ನಗರಕ್ಕೆ ಭೇಟಿ ನೀಡಿದ ಶಾಸಕ ಜಿಟಿಡಿಯವರಿಗೆ ಅಲ್ಲಿನ ನಿವಾಸಿಗಳು, ಬಡಾವಣೆಯಲ್ಲಿ ಶುಚಿತ್ವ ಇರುವುದಿಲ್ಲ. ರಸ್ತೆ, ಚರಂಡಿ ನಿರ್ಮಾಣವಾಗಬೇಕು. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಪರಿಹರಿಸಿಕೊಡುವಂತೆ ಕೋರಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಅಲ್ಲಿಯೆ ನೆರೆದಿದ್ದ ಅಧಿಕಾರಿಗಳಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಪಿ.ಜಿ. ರಮೇಶ್, ಶುಚಿತ್ವಕ್ಕೆ ಸಂಬಂಧಿಸಿದಂತೆ ಈ ವಾರ್ಡ್‌ನಲ್ಲಿ ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇದೆ. ಸದ್ಯದಲ್ಲಿಯೇ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ಜನರಿಗೆ ಆಶ್ವಾಸನೆ ನೀಡಿದ ಅವರು, ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರ ಅನುಮೋದನೆ ನೀಡಿದ ತಕ್ಷಣ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ಮಾಜಿ ಮೇಯರ್ ಟಿ.ಬಿ. ಚಿಕ್ಕಣ್ಣ, ಪಾಲಿಕೆ ಸದಸ್ಯರಾದ ಪುಷ್ಪಲತಾ ಚಿಕ್ಕಣ್ಣ, ಜೆ.ಎಸ್. ಜಗದೀಶ್, ನರ್ಮ್ ಇಇ ಜಯರಾಂ, ವಾಣಿ ವಿಲಾಸ ನೀರು ಸರಬರಾಜು ಕಾರ್ಯಾಗಾರದ ಇಇ ರಂಗಸ್ವಾಮಿ, ಎಇಇ ರಾಜಗೋಪಾಲ್, ಪಾಲಿಕೆ ಡಿಒ ಗೋವಿಂದಪ್ಪ, ಮುಖಂಡರಾದ ಮಲ್ಲಪ್ಪಗೌಡ, ಚಿಕ್ಕಣ್ಣ, ವೆಂಕಟೇಶ್, ಲೋಕೇಶ್, ಶೇಖರ್, ಬೋರಪ್ಪ, ಟೆಂಟ್ ಕುಮಾರ್, ಮಂಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

