ಮೈಸೂರು

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಬದ್ಧ

Published On :

ಮೈಸೂರು: ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದ್ದು, ನಗರ ಪ್ರದೇಶದ ಮೂವರು ಶಾಸಕರು, ಮೇಯರ್ ಕುಳಿತು, ಚರ್ಚಿಸಿ ಅಭಿವೃದ್ಧಿಗೆ ಸಂಬಂಧಪಟ್ಟ ನೀಲನಕ್ಷೆ ತಯಾರಿಸಿ ನನಗೆ ಸಲ್ಲಿಸಿದರೆ ಈಡೇರಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ನಗರದ ವಾಣಿಜ್ಯ ತೆರಿಗೆ ಇಲಾಖೆ (ಜಾರಿ) ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯದ ಕಡೆ ಗಮನ ಹರಿಸುತ್ತಿದ್ದೇನೆ. ಬೆಂಗಳೂರು ನಂತರ ಮೈಸೂರು ನಗರ ಅತಿ ವೇಗವಾಗಿ ಬೆಳೆಯುತ್ತಿದೆ. ಮೂಲಭೂತ ಸೌಕರ್ಯ ಕಲ್ಪಿಸುವುದು ತಮ್ಮ ಕರ್ತವ್ಯವಾಗಿದೆ. ಯಾವ ಯಾವ ಯೋಜನೆಗಳು ಬೇಕು ಎಂಬುದನ್ನು ನನ್ನ ಗಮಕ್ಕೆ ತಂದರೆ ಮುಂದಿನ ಮೂರು ನಾಲ್ಕು ವರ್ಷದಲ್ಲಿ ಪೂರೈಸುತ್ತೇನೆ ಎಂದರು.
ಮಹಾರಾಣಿ ಕಾಲೇಜಿನಲ್ಲಿ ಒಟ್ಟು 8 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಬಡವರು, ಕೆಳ ವರ್ಗಕ್ಕೆ ಸೇರಿದವರೆ ಹೆಚ್ಚಿದ್ದಾರೆ. ಇರುವ ಹಾಸ್ಟೆಲ್ ವ್ಯವಸ್ಥೆಯು ಅಸಮರ್ಪಕವಾಗಿದೆ. ಇದೆಲ್ಲವನ್ನು ಗಮನಿಸಿ ಹೊಸ ಕಟ್ಟಡ ನಿರ್ಮಿಸುವ ಬಗ್ಗೆ ಹಸಿರು ನಿಶಾನೆ ತೋರಿಸಿದ್ದೇನೆ ಎಂದು ಅವರು ಹೇಳಿದರು.
ನಗರದಲ್ಲಿ ಕ್ಯಾನ್ಸರ್ ಆಸ್ಪತ್ರೆ: ಮೈಸೂರಿನಲ್ಲಿ ಕಿದ್ವಾಯಿ ಮಾದರಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ, ಗಂಥಿ ಸಂಸ್ಥೆ ನಿರ್ಮಿಸಲು ಚಿಂತಿಸಲಾಗಿದೆ. ಇದರ ಜತೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ನಿರ್ಮಾಣ ಮಾಡಲಾಗುವುದು. ಜಯದೇವ ಆಸ್ಪತ್ರೆಯನ್ನು ಉನ್ನತ ದರ್ಜೆಗೇರಿಸಲು ಸಚಿವ ಸಂಪುಟದಲ್ಲಿ 115 ಕೋಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಗೆ ಪ್ರತ್ಯೇಕವಾಗಿ ಜಿಲ್ಲಾ ಭವನ ನಿರ್ಮಿಸಲು ಎಲ್ಲಿ ಸೂಕ್ತವೆನಿಸುತ್ತದೋ ಅಲ್ಲಿ ಜಾಗ ನೀಡುವುದಾಗಿ ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.