ಮೈಸೂರು

ಗ್ರಾಮ, ನಗರದ ನಡುವೆ ತಾರತಮ್ಯ ಬೇಡ

Published On :

ಹುಣಸೂರು: ಅಭಿವೃದ್ಧಿ ವಿಚಾರದಲ್ಲಿ ನಗರ ಮತ್ತು ಗ್ರಾಮೀಣ ಭಾಗದ ನಡುವೆ ಸರ್ಕಾರಗಳು ತಾರತಮ್ಯ ನೀತಿ ಅನುಸರಿಸುವ ಪ್ರವೃತ್ತಿ ತೊಲಗದ ಹೊರತು ಗ್ರಾಮೀಣ ಭಾರತದ ಸರ್ವತೋಮುಖ ಅಭಿವೃದ್ಧಿ ಅಸಾಧ್ಯ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ವಿಷಾದಿಸಿದರು.
ಗೋವಿಂದನಹಳ್ಳಿ ವಲಯದ ವತಿಯಿಂದ ಹೊಸೂರು ಗೇಟ್‌ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಪ್ರಗತಿ ಬಂಧು ಸ್ವ-ಸಹಾಯ ಸಂಘದ ಒಕ್ಕೂಟ ಉದ್ಘಾಟಿಸಿ ಮಾತನಾಡಿದ ಅವರು, ಡಾ.ವೀರೇಂದ್ರ ಹೆಗ್ಗಡೆ ಅವರು ಕಳೆದ 25 ವರ್ಷಗಳ ಮುಂಚೆಯೇ ಇಂತಹ ಆಲೋಚನೆಗಳನ್ನು ಈ ಭಾಗದಲ್ಲಿ ಜಾರಿಗೊಳಿಸಿದ್ದಲ್ಲಿ ಇಲ್ಲಿನ ಗ್ರಾಮಗಳು ಇಂದು ಪ್ರಗತಿ ಪಥದಲ್ಲಿ ಸಾಗುತ್ತಿದ್ದವು ಎಂದರು.
ಯೋಜನೆ ನಿರ್ದೇಶಕ ಮಹಾಬಲ ಕುಲಾಲ್ ಮಾತನಾಡಿದರು. ಉಮ್ಮತ್ತೂರು ಗ್ರಾಪಂ ಅಧ್ಯಕ್ಷ ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ರತ್ನಪುರಿ ಸೇವಾ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಆಲಿಜಾನ್, ವಕೀಲ ಸುರೇಶ್, ಮುಖಂಡರಾದ ಮಂಜೇಗೌಡ, ವಲಯ ಮೇಲ್ವಿಚಾರಕಿ ಸುಜಾತ ಹಾಗೂ ಸ್ವಸಹಾಯ ಸಂಘದ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.