18ಕ್ಕೆ ಪಿರಿಯಾಪಟ್ಟಣದಲ್ಲಿ ಕೃಷಿ ಉತ್ಸವ ಆರಂಭ
ಕ.ಪ್ರ.ವಾರ್ತೆ , ಪಿರಿಯಾಪಟ್ಟಣ , ಜ. 15
ಪಟ್ಟಣದ ಸಾಯಿ ಸಮುದಾಯ ಭವನದ ಬಳಿ ಕೃಷಿ ಉತ್ಸವ ಏರ್ಪಡಿಸಲಾಗಿದೆ ಎಂದು ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಕೀಲ ಬಿ.ವಿ. ಜವರೇಗೌಡ ಹೇಳಿದರು.
ಜ.18 ರಂದು ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಈ ಉತ್ಸವದಲ್ಲಿ ಹೈನುಗಾರಿಕೆ, ಕುರಿ ಸಾಕಾಣಿಕೆ, ಇಲಾಖಾ ಸವಲತ್ತು, ಮಿಶ್ರಬೆಳೆ ಮತ್ತು ಆಧುನಿಕ ಕೃಷಿ ಪದ್ಧತಿ ಬಗ್ಗೆ ನುರಿತ ತಜ್ಞರಿಂದ ವಿಚಾರಗೋಷ್ಠಿಗಳು ಜರುಗಲಿವೆ. ರೈತರಿಗೆ ದೊರೆಯಬಹುದಾದ ವಿವಿಧ ಇಲಾಖಾ ಸವಲತ್ತುಗಳ ಮಾಹಿತಿ ಹಾಗೂ ಖರೀದಿಗೆ ಅವಕಾಶವಿರುವ ವಸ್ತು ಪ್ರದರ್ಶನದ 40ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಸ್ವ- ಸಹಾಯ ಸಂಘಗಳ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ, ಪುರುಷರಿಗೆ ತೆಂಗಿನಕಾಯಿ ಸುಲಿಯುವ ಸ್ಪರ್ಧೆ ಏರ್ಪಡಿಸಲಾಗಿದ್ದು ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿದ್ದು ರೈತರು ಆಗಮಿಸುವಂತೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಕಾರ್ಯಕ್ರಮವನ್ನು ಬೆಳಗ್ಗೆ 9ಕ್ಕೆ ಶಾಸಕ ಕೆ. ವೆಂಕಟೇಶ್ ಅಧ್ಯಕ್ಷತೆಯಲ್ಲಿ ತಾಲೂಕಿನ ಪ್ರಗತಿಪರ ಕೃಷಿ ಮಹಿಳೆ ಐಚನಹಳ್ಳಿ ಗ್ರಾಮದ ಕೆ.ಪಿ. ಜ್ಯೋತಿ ಉದ್ಘಾಟಿಸುವರು. ತಾಪಂ ಅಧ್ಯಕ್ಷ ಪವಿತ್ರಾ, ಜಿಪಂ ಸದಸ್ಯರಾದ ಎಂ.ಕೆ. ಸುಚಿತ್ರಾ, ಎಂ.ಪಿ. ಚಂದ್ರೇಶ್, ಮಂಜುಳಾರಾಜ್, ಕಾವೇರಿ ಶೇಖರ್, ಎಸ್.ಎ. ಶಿವಣ್ಣ, ತಾಪಂ ಉಪಾಧ್ಯಕ್ಷ ಎಚ್.ಎಸ್. ಪ್ರಕಾಶ್ ಪಾಲ್ಗೊಳ್ಳಲಿದ್ದು ಕಾರ್ಯಕ್ರಮವು ಸಂಜೆವರೆಗೆ ನಡೆಯಲಿದೆ ಎಂದು ತಿಳಿಸಿದರು. ಸಮಿತಿಯ ಕೋಶಾಧಿಕಾರಿ ಟಿ.ಎಸ್. ಹರೀಶ್, ಧರ್ಮಸ್ಥಳ ಸಂಸ್ಥೆಯ ಮಂಜುನಾಥ್, ಮನಪ್ಪ, ವಿನೋದ್ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

