ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಣೆ: ವಿಷಾದ
ಕ.ಪ್ರ.ವಾರ್ತೆ , ಕೆ.ಆರ್. ನಗರ , ಜ. 15
ಯುವಜನತೆ ಸಿನೆಮಾ, ಕ್ರಿಕೆಟ್, ಟಿ.ವಿ., ಮನರಂಜನೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವುದರಿಂದ ಸಂಸ್ಕೃತಿ ನಶಿಸಿ ಹೋಗುತ್ತಿದೆ ಎಂದು ಜಿಪಂ ಸದಸ್ಯೆ ನಳಿನಾಕ್ಷಿ ವೆಂಕಟೇಶ್ ವಿಷಾದಿಸಿದರು.
ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ನೆಹರು ಯುವ ಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹೆಬ್ಬಾಳುಕೊಪ್ಪಲು ಬಸವೇಶ್ವರ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಯುವ ಜಾಗೃತಿ ಹಾಗೂ ರಸಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕೃತಿ ಮತ್ತು ಭಾಷೆಯನ್ನು ಯುವಜನತೆ ಬೆಳೆಸಬೇಕು ಎಂದು ತಿಳಿಸಿದರು.
ಜಿಲ್ಲಾ ಸಮನ್ವಯಾಧಿಕಾರಿ ಎಂ.ಎನ್. ನಟರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಮಠಪತಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಸಗ್ರಹಣ ಚಿತ್ರಕಲೆ, ಪ್ರಾತ್ಯಕ್ಷಿತೆಯನ್ನು ಲೆಸ್ಲಿ ತ್ಯಾಗರಾಜ್ ಮತ್ತು ಜಾನಪದ ಗಾಯನವನ್ನು ನಂಜುಂಡಸ್ವಾಮಿ ಮತ್ತು ತಂಡದವರು ನಡೆಸಿಕೊಟ್ಟರು. ತಾಪಂ ಸದಸ್ಯೆ ಲಕ್ಷ್ಮೀ ಕನಕರಾಜು, ಗ್ರಾಪಂ ಅಧ್ಯಕ್ಷೆ ಅನುಸೂಯ ಶ್ರೀನಿವಾಸ್, ಪ್ರಾಂಶುಪಾಲ ಶಶಿಧರ್, ಮುಖ್ಯೋಪಾಧ್ಯಾಯ ಚೌಡನಾಯಕ, ರಾಜ್ಯ ಯುವ ಪ್ರಶಸ್ತಿ ವಿಜೇತ ದೀಪಕ್, ಜಿಲ್ಲಾ ಪ್ರಶಸ್ತಿ ವಿಜೇತ ದಿನೇಶ್, ಸಂಘದ ಅಧ್ಯಕ್ಷ ಅಜಿತ್, ಮಾಜಿ ಅಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಉಮೇಶ್, ಪುನೀತ್, ಎಸ್. ಜೀವನ್, ಭೈರಪ್ಪ, ವಿಕಾಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

