ಮೈಸೂರು

ಗ್ರಂಥಾಲಯದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ

Published On :

ಮೈಸೂರು: ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ವಿಭಾಗಗಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಮೈಸೂರು ವಿವಿ ಅಂತಾರಾಷ್ಟ್ರೀಯ ಮಾಹಿತಿ ನಿರ್ವಹಣೆ ಶಾಲೆಯ ಕಾರ್ಯನಿರ್ವಾಹಕ ನಿರ್ದೇಶಕಿ ಪ್ರೊ.ಶಾಲಿನಿ ಆರ್. ಅರಸ್ ಹೇಳಿದರು.
ಮಾನಸ ಗಂಗೋತ್ರಿಯ ಯುಜಿಸಿ ಶೈಕ್ಷಣಿಕ ಸಿಬ್ಬಂದಿ ಮಹಾವಿದ್ಯಾಲಯ ಮತ್ತು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ವಿಭಾಗ ಆಯೋಜಿಸಿದ್ದ 20ನೇ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಪುನಶ್ಚೇತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಗ್ರಂಥಾಲಯ ಬಳಕೆದಾರರಿಗೆ ಮಾಹಿತಿ ಸಂಗ್ರಹ ಮತ್ತು ಮಾಹಿತಿ ವಿನಿಮಯಕ್ಕೆ ಪೂರಕವಾದ ಸ್ಥಳಾವಕಾಶ ಕಲ್ಪಿಸಬೇಕು. ಇಂದಿನ ಸ್ಪರ್ಧಾತ್ಮಕ ಮತ್ತು ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಗ್ರಂಥಾಲಯಗಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಮೇಲ್ದರ್ಜೆಗೇರಬೇಕಿದೆ. ಪ್ರತಿ ಕ್ಷಣಕ್ಕೂ ಮಾಹಿತಿ ಬದಲಾಗುತ್ತಿರುತ್ತದೆ. ಆದ್ದರಿಂದ ಗ್ರಂಥಾಪಾಲಕರೂ ಈ ಬಗ್ಗೆ ತಿಳಿದುಕೊಂಡಿರಬೇಕು ಎಂದರು.
ಗೂಗಲ್‌ನ ಯಾವ ಜಾಲತಾಣದಲ್ಲಿ ಯಾವುದರ ಕುರಿತು ಮಾಹಿತಿ ಸಿಗುತ್ತದೆ ಎಂಬುದನ್ನು ತಿಳಿದಿರಬೇಕು ಮತ್ತು ಗ್ರಂಥಾಲಯ ಬಳಕೆದಾರರಿಗೆ ಆ ಎಲ್ಲಾ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.
ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ವಿಭಾಗದ ಅಧ್ಯಕ್ಷೆ ಪ್ರೊ.ಖೈಸರ್ ನಿಕಂ, ಯುಜಿಸಿ ಶೈಕ್ಷಣಿಕ ಸಿಬ್ಬಂದಿ ಮಹಾವಿದ್ಯಾಲಯದ ನಿರ್ದೇಶಕ ಪ್ರೊ.ಲಿಂಗರಾಜ ಗಾಂಧಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.