ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
ಟಿ. ನರಸೀಪುರ: ಬಿಜೆಪಿಯಲ್ಲಿ ಕೆಜೆಪಿ ವಿಲೀನಗೊಂಡು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮರಳಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಪಟ್ಟಣದ ಶ್ರೀ ಬಣ್ಣಾರಿ ಅಮ್ಮನವರ ದೇವಾಲಯದಲ್ಲಿ ನೂರೊಂದು ಈಡುಗಾಯಿ ಒಡೆದು ವಿಜಯೋತ್ಸವ ಆಚರಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ತೋಟದಪ್ಪ ಬಸವರಾಜು ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಅಧಿಕಾರ ಹಿಡಿದು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕಿದೆ. ಜೊತೆಗೆ ಭ್ರಷ್ಟಾಚಾರ ಮುಕ್ತ ಭಾರತವನ್ನಾಗಿ ಮಾಡಲು ನರೇಂದ್ರ ಮೋದಿಯವರೇ ಸಮರ್ಥವಾದ ವ್ಯಕ್ತಿ ಎಂದರು.
ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ಭಾವಚಿತ್ರವಿರುವ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಗುಲ್ಬರ್ಗ ಶೂಟೌಟ್‌ನಲ್ಲಿ ಹುತಾತ್ಮರಾದ ಸಬ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಬಂಡೆ ಅವರ ನಿಧನಕ್ಕೆ ಎರಡು ನಿಮಿಷಗಳ ಕಾಲ ಮೌನಾಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಉಸ್ತುವಾರಿ ಎನ್.ವಿ. ಫಣೀಶ್, ಹಿರಿಯ ಮುಖಂಡ ಮಹದೇವಯ್ಯ, ಕ್ಷೇತ್ರಾಧ್ಯಕ್ಷ ಬಸವರಾಜು, ಪ್ರಧಾನ ಕಾರ್ಯದರ್ಶಿ ಸಿದ್ದಮಲ್ಲಪ್ಪ, ಎ.ಎನ್. ರಂಗೂನಾಯಕ್, ವೆಂಕಟರಮಣಶೆಟ್ಟಿ, ಮಹದೇವಪ್ಪ, ಲೋಕೇಶ್, ಟೌನ್ ಅಧ್ಯಕ್ಷ ಎಸ್. ದಿಲೀಪ್, ಯುವ ಮೋರ್ಚಾ ಅಧ್ಯಕ್ಷ ವಿಜಯಕುಮಾರ್, ಮುಖಂಡರಾದ ಎನ್.ಲೋಕೇಶ, ಜಯಣ್ಣ, ಮಹದೇವು, ಮಹದೇವಸ್ವಾಮಿ, ಆರ್. ರಾಮಸ್ವಾಮಿ, ಶಿವಸ್ವಾಮಿ, ಮಹದೇವಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

