ಮೈಸೂರು

ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

Published On :

ಮೈಸೂರು: ಪಡಿತರ ಚೀಟಿ ವಿತರಣೆಯಲ್ಲಿನ ಅವ್ಯವಸ್ಥೆ, ಪೆಟ್ರೋಲ್, ಡೀಸೆಲ್, ಅನಿಲ ಬೆಲೆ ಏರಿಕೆ ವಿರೋಧಿಸಿ ಕರ್ನಾಟಕ ರಾಜ್ಯ ಜನಜಾಗೃತಿ ಸಿಂಹಗರ್ಜನೆ ಯುವಸೇನೆ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟಿಸಿದರು.
ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಬಾರಿಸಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವರ್ಷಪೂರ್ತಿ ಪಡಿತರ ಚೀಟಿ ವಿತರಿಸುತ್ತಿದ್ದರೂ ಸಾರ್ವಜನಿಕರು ಪಡಿತರ ಚೀಟಿಗೆ ಪರದಾಡುತ್ತಿದ್ದಾರೆ. ಇಲಾಖೆಯು ಎಪಿಎಲ್ ಪಡಿತರ ಚೀಟಿದಾರರಿಗೆ 10 ನಂತೆ ಅಕ್ಕಿ ಮತ್ತು ಇತರೆ ವಸ್ತುಗಳು ದೊರೆಯುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಅದೂ ಕೂಡ ಇಲ್ಲದಂತಾಗಿದೆ ಎಂದುಅವರು ಆರೋಪಿಸಿದರು.
ಬಿಪಿಎಲ್ ಪಡಿತರ ಚೀಟಿದಾರರು 1 ರಂತೆ ಅಕ್ಕಿ ಪಡೆದು ಕಾಳಸಂತೆಯಲ್ಲಿ ಮಾರುತ್ತಿದ್ದಾರೆ. ಇದನ್ನು ತಪ್ಪಿಸಿ, ಒಂದೆ ಬೆಲೆಯಲ್ಲಿ ಅಕ್ಕಿ ವಿತರಣೆ ಆಗಬೇಕು. ತಪ್ಪಿದರೆ ಮುಕ್ತ ಮಾರುಕಟ್ಟೆಯಲ್ಲಿ ಎಲ್ಲರಿಗೂ ದೊರೆಯುವಂತೆ ಮಾಡಬೇಕು. ಆಹಾರ ಇಲಾಖೆಯಲ್ಲಿ ವಲಯ ಕಚೇರಿಗಳಿದ್ದೂ ಯಾವುದೆ ಪ್ರಯೋಜನವಿಲ್ಲ. ಪಡಿತರ ಚೀಟಿಯನ್ನು ಉಚಿತವಾಗಿ ನೀಡಬೇಕೆಂಬ ನಿಯಮ ಇದ್ದರೂ ಸಾರ್ವಜನಿಕರ ಹತ್ತಿರ ಹಣ ವಸೂಲಿ ಮಾಡಲಾಗುತ್ತಿದೆ. ಈ ಬಗ್ಗೆ ಗಮನಹರಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ವರ್ಷವಿಡಿ ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಮತ್ತು ಆಟೋ ಗ್ಯಾಸ್ ಬೆಲೆಗಳನ್ನು ಮನದಂತೆ ಏರಿಸುತ್ತಿದೆ. ಇದರಿಂದ ಎಲ್ಲಾ ಬೆಲೆಗಳು ಗಗನಕ್ಕೆ ಏರುತ್ತಿದೆ. ಕೂಡಲೇ ಬೆಲೆ ಇಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಯುವಸೇನೆಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಭಾನು ಮೋಹನ್, ವಿನೋದ್ ಕುಮಾರ್, ಎ. ಪ್ರಕಾಶ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.