ವೀರಭದ್ರೇಶ್ವರ ದೇಗುಲಕ್ಕೆ 10 ಲಕ್ಷ ಬಿಡುಗಡೆ
ಕೆ.ಆರ್. ನಗರ: ಪಟ್ಟಣದ ಮಧುವನಹಳ್ಳಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಿರುವ ವೀರಭದ್ರೇಶ್ವರ ದೇವಾಲಯಕ್ಕೆ ಶಾಸಕರ ನಿಧಿಯಿಂದ 10 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ದೇವಾಲಯ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ದೇವಾಲಯ ಕಟ್ಟುವುದರ ಜತೆಗೆ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಬೇಕು, ಆ ಮೂಲಕ ಸಹ ಬಾಳ್ವೆ ನಡೆಸಿ ಪರಸ್ಪರ ಸಹೋದರತ್ವದಿಂದ ಬದುಕಬೇಕು ಎಂದು ತಿಳಿಸಿದರು.
ಶತಮಾಗಳಷ್ಟು ಹಳೆಯದಾದ ದೇವಾಲಯವನ್ನು ಉತ್ತಮವಾಗಿ ದುರಸ್ತಿಗೊಳಿಸಲು ದೇವಾಲಯದ ವ್ಯಾಪ್ತಿಗೆ ಒಳಪಡುವ 10 ಗ್ರಾಮಗಳ ಸಾರ್ವಜನಿಕರು ಸಹಕಾರ ನೀಡಬೇಕು. ಚುನಾವಣೆ ವೇಳೆ ಮಾತ್ರ ರಾಜಕೀಯ ಮಾಡಬೇಕು ಉಳಿದ ಸಮಯದಲ್ಲಿ ಗ್ರಾಮಗಳ ಅಭಿವೃದ್ಧಿಗೆ ದುಡಿಯಿರಿ ಎಂದು ಅವರು ಕಿವಿಮಾತು ಹೇಳಿದರು.
ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಶ್ರೀಗಳು ಮಾತನಾಡಿ, ಶಾಸಕ ಸಾ.ರಾ. ಮಹೇಶ್ ಉತ್ತಮ ಕೆಲಸ ಮಾಡುತ್ತಿದ್ದು, ಎಲ್ಲರೂ ಅವರ ಸೇವೆಯನ್ನು ಪಡೆದುಕೊಳ್ಳಿ ಎಂದರಲ್ಲದೆ, ಆಧುನಿಕ ಯುಗದಲ್ಲಿ ಮನುಷ್ಯ ಧರ್ಮ ಧಾರ್ಮಿಕತೆಯಿಂದ ದೂರಾಗುತ್ತಿದ್ದು, ದೇವಾಲಯಗಳಿಗೆ ಆಗಾಗ ಭೇಟಿ ನೀಡುತ್ತಿದ್ದರೆ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ತಿಳಿಸಿದರು.
ನಂತರ ಶಾಸಕರು 23ನೇ ವಾರ್ಡ್‌ನಲ್ಲಿ ಸಂಚರಿಸಿ ಸಾರ್ವಜನಿಕ ಸಮಸ್ಯೆ ಆಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವಾಗಿ ಆದ್ಯತೆಯ ಮೇಲೆ ಅನುದಾನ ಕೊಡಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಪುರಸಭಾ ಮಾಜಿ ಅಧ್ಯಕ್ಷ ಡಿ.ಕಾಂತರಾಜು, ಸದಸ್ಯರಾದ ಕೆ.ಎಲ್. ಜಗದೀಶ್, ಸರೋಜ ಮಹದೇವ್, ಶಿವಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

