ಮೈಸೂರು

ಕಾರ್ಮಿಕರಿಂದ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ

Published On :

ಟಿ. ನರಸೀಪುರ: ಸಾಮಾಜಿಕ ಸೇವಾ ಭದ್ರತೆಯೊಂದಿಗೆ ಕನಿಷ್ಠ ಕೂಲಿಯ ವೇತನ, ಎಲ್ಲ ಕಾರ್ಡುದಾರರಿಗೆ ತಾರತಮ್ಯವಿಲ್ಲದೆ ವೇತನ ನೀಡುವಂತೆ ಆಗ್ರಹಿಸಿ ಕಾರ್ಮಿಕರಿಂದ ವಿಧಾನಸೌಧ ಮುತ್ತಿಗೆ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸುನಂದಮ್ಮ ಹೇಳಿದರು.
ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಲ್ಲಿ ಜ.23ರ ವಿಧಾನಸೌಧ ಮುತ್ತಿಗೆ ಹಿನ್ನೆಲೆ ಶುಕ್ರವಾರ ನಡೆದ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳು ಸರಿ ಇಲ್ಲದ್ದರಿಂದ ಅಗತ್ಯ ವಸ್ತುಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿದೆ. ಆಹಾರ ಪದಾರ್ಥಗಳು ಗಗನಮುಖಿಯಾಗಿವೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರದ ವಿವಿಧ ಯೋಜನೆಗಳಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ನೌಕರರು ಜೀವನ ನಡೆಸುವುದು ಕಷ್ಟವಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರದ ಕರಾಳ ಎಸ್ಮಾ ವಿರೋಧಿಸಿ, ಕಾರ್ಮಿಕ ಕಾನೂನುಗಳ ಜಾರಿಗಾಗಿ ಒತ್ತಾಯಿಸಿ,  ನೌಕರರಿಗೆ ಕನಿಷ್ಠ ವೇತನವಾಗಿ 10 ಸಾವಿರ ಹಾಗೂ ಸಾಮಾಜಿಕ ಭದ್ರತೆ ನೀಡಬೇಕು. ಗ್ಯಾರಂಟಿ ಪಿಂಚಣಿ, ನಿವೇಶನ, ಆಹಾರಕ್ಕಾಗಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡುಗಳಿಗೆ ತಾರತಮ್ಯವಿಲ್ಲದೆ ನೀಡುವುದು. ಐಸಿಡಿಎಸ್ ಹಾಗೂ ಸಾರ್ವಜನಿಕ ಕೈಗಾರಿಕೆಗಳ ಖಾಸಗೀಕರಣ ವಿರೋಧಿಸಿ ಜ.23 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತಿದೆ ಎಂದು ತಿಳಿಸಿದರು.
ಪಂಚಾಯ್ತಿ ನೌಕಕರ ಮುಷ್ಕರ: ಕನಿಷ್ಠ ವೇತನ, ಬೋನಸ್, ವಿಮೆ ಹಾಗೂ ಭವಿಷ್ಯ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಗ್ರಾಪಂ ನೌಕರರು ಜ.20 ಮತ್ತು 21ರ ಎರಡು ದಿನಗಳ ಕಾಲ ಮುಷ್ಕರ ನಡೆಸಲಾಗುವುದು ಎಂದು ಅಧ್ಯಕ್ಷ ಚಂದ್ರು ಹೇಳಿದರು.
ಜಾಥಾದಲ್ಲಿ ಫೆಡರೇಷನ್ ಅಧ್ಯಕ್ಷ ಸಿ.ಪುಟ್ಟಮಲ್ಲಯ್ಯ, ಅಕ್ಷರ ದಾಸೋಹ ನೌಕರರಾದ ಉಮಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.