ಗುರಿ ಸಾಧನೆಗೆ ಗುರು ಪ್ರೇರಣೆ ಮುಖ್ಯ
ಮೈಸೂರು: ಯಾವುದೇ ಗುರಿ ಸಾಧನೆಗೆ ಗುರುವಿನ ಪ್ರೇರಣೆ ಬಹುಮುಖ್ಯ ಎಂದು ಕೆ.ಆರ್.ನಗರ ಶಾಸಕ ಸಾ.ರಾ. ಮಹೇಶ್ ಹೇಳಿದರು.
ಶಾರದ ವಿಲಾಸ ಪದವಿಪೂರ್ವ ಕಾಲೇಜು ವತಿಯಿಂದ ಕೃಷ್ಣಮೂರ್ತಿಪುರಂನ ಸಂಸ್ಥೆ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿ ವೇದಿಕೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಗುರಿಯ ಹಿಂದೆ ಗುರುವಿನ ಪಾತ್ರ ಅತಿ ಮುಖ್ಯವಾಗಿದ್ದು, ಉದ್ದೇಶ ಒಳ್ಳೆಯದಾಗಿದ್ದರೆ ಸಮುದಾಯದ ಸರ್ವೋತೋಮುಖ ಅಭಿವೃದ್ಧಿ ಹೊಂದುತ್ತದೆ. ಇಂದಿನ ಯುವಜನತೆ ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಉತ್ತಮ ಆಲೋಚನೆಯೊಂದಿಗೆ ತಮ್ಮ ಜೀವನ ರೂಪಿಸಿಕೊಳ್ಳಬೇಕು ಎಂದರು.
ಆಹ್ವಾನಿತರಾಗಿ ಮಾತನಾಡಿದ ಸಂಸ್ಥೆ ಅಧ್ಯಕ್ಷ ಬಿ.ಎಸ್.ಪಾರ್ಥಸಾರಥಿ, ಭಾರತೀಯರಾದ ನಾವು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿರುವುದು ಶೋಚನೀಯ ಸಂಗತಿ. ದೇಶದಲ್ಲಿ ಶೇ.40ರಷ್ಟು ಯುವ ಸಮುದಾಯವಿದ್ದು, ಅವರು ಶಿಸ್ತು, ಸಂಯಮ, ಬುದ್ಧಿವಂತಿಕೆಯಿಂದ ಬದುಕಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದರು. ಸಂಸ್ಥೆಯ ವತಿಯಿಂದ ಶಾಸಕ ಸಾ.ರಾ. ಮಹೇಶ್ ಅವರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಸಿ.ಕೆ.ಅಶೋಕ್, ಜೀವನದಲ್ಲಿ ಆಸಕ್ತಿ ಇದ್ದರೆ ಏನನ್ನಾದರೂ ಸಾಧಿಸಬಹುದು ಎಂದರು. ಸಂಸ್ಥೆ ಗೌರವ ಕಾರ್ಯದರ್ಶಿ ಎಸ್.ರವಿಶಂಕರ್ ಇದ್ದರು. ಉಪನ್ಯಾಸಕರಾದ ರಾಜೇಂದ್ರಪ್ರಸಾದ್ ಸ್ವಾಗತಿಸಿದರು. ಭೀಮರಾಜ್ ಮತು ಡಿ.ಬಿ.ಲತಾ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

