ಮೈಸೂರು

ನೂತನ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

Published On :

ಪಿರಿಯಾಪಟ್ಟಣ: ರೈತರು ಹಳೆಯ ಕೃಷಿ ವಿಧಾನಗಳನ್ನು ಬಿಟ್ಟು ನೂತನ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಕೆ.ವೆಂಕಟೇಶ್ ಕರೆ ನೀಡಿದರು.
ಪಟ್ಟಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ, ಕೃಷಿ ಇಲಾಖೆ ವತಿಯಿಂದ ನಡೆದ ಕೃಷಿ ಉತ್ಸವ ಮತ್ತು ಪ್ರಗತಿಬಂಧು ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿ ಉತ್ಸವಗಳು ವೇದಿಕೆ ಮತ್ತು ಭಾಷಣಕ್ಕೆ ಸೀಮಿತವಾಗಿರದೆ ಕಾರ್ಯರೂಪಕ್ಕೆ ಬರಬೇಕು. ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಜನಸಂಖ್ಯೆಯಲ್ಲೂ ವಿಸ್ತಾರವಾಗಿದೆ. ಶೇ.80ರಷ್ಟು ಮಂದಿ ಬೆಳೆಯುವವರೇ ಇರುವುದರಿಂದ ಕೊಂಡುಕೊಳ್ಳುವವರ ಸಂಖ್ಯೆ ಅತಿ ಕಡಿಮೆ ಇದೆ ಎಂದರು.
ತಾಲೂಕಿನ ಪ್ರಗತಿಪರ ರೈತ ಮಹಿಳೆ ಕೆ.ಸಿ.ಜ್ಯೋತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಗಮನವಿಟ್ಟು ಕೆಲಸ ಮಾಡಿದರೆ ಕೃಷಿ ಕ್ಷೇತ್ರದಲ್ಲಿಯೂ ಸಾಧನೆ ಮಾಡಬಹುದು. ಪುರುಷರನ್ನೇ ಅವಲಂಬಿಸುವುದನ್ನು ಬಿಟ್ಟು, ಸ್ವಾವಲಂಬಿಗಳಾಗಲು ಹೈನುಗಾರಿಕೆ, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಹಂದಿ ಸಾಕಾಣಿಕೆ, ತೋಟಗಾರಿಕೆ ಸೇರಿದಂತೆ ಹಲವು ಉಪ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ನಿರ್ದೇಶಕ ರಾಧಕೃಷ್ಣ, ವಕೀಲ ಬಿ.ವಿ.ಜವರೇಗೌಡ ಮಾತನಾಡಿದರು.
ನಂತರ ಕೃಷಿಗೆ ಸಂಬಂಧಿಸಿದ ವಿಚಾರಗೋಷ್ಠಿ ನಡೆದವು. ವಿವಿಧ ಕಲಾವಿದರಿಂದ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಾಪಂ ಅಧ್ಯಕ್ಷೆ ಪವಿತ್ರಾ ಯೋಗೇಶ್, ಉಪಾಧ್ಯಕ್ಷ ಎಚ್.ಎಸ್.ಪ್ರಕಾಶ್, ಜಿಪಂ ಸದಸ್ಯೆ ಕಾವೇರಿ ಶೇಖರ್, ತಾಪಂ ಸದಸ್ಯ ರಘುನಾಥ್, ಸಂಪನ್ಮೂಲ ವ್ಯಕ್ತಿಗಳಾದ ಡಾ. ವೈ.ಡಿ.ರಾಜಣ್ಣ, ಡಾ. ಚಾಮರಾಜ್, ಕೃಷಿ ನಿರ್ದೇಶಕ ರಾಜು, ಕೋಶಾಧಿಕಾರಿ ಹರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.