ಮೈಸೂರು

ನೌಕರಿ ಕಾಯುತ್ತ ಕೂರಬೇಡಿ: ನಾಗವಾರ

Published On :

ಮೈಸೂರು: ಗುರಿಯಿಲ್ಲದೆ ಕೇವಲ ನೌಕರಿ ಕಾಯುತ್ತಾ ಕುಳಿತರೆ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಸಾಹಿತಿ ಪ್ರೊ. ಕಾಳೇಗೌಡ ನಾಗವಾರ ಹೇಳಿದರು.
ಮೈಸೂರು ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ಮತ್ತು ಬೆಂಗಳೂರಿನ ವರ್ತಮಾನ ಬಳಗ ಜಂಟಿಯಾಗಿ ಭಾನುವಾರ ಅಂಬೇಡ್ಕರ್ ಸಂಶೋಧನ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ ದಲಿತರು ಮತ್ತು ಉದ್ಯಮಶೀಲತೆ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಸ್ವಯಂ ಉದ್ಯೋಗ ಕೈಗೊಳ್ಳಲು ಸಾವಿರಾರು ಅವಕಾಶ ಇದೆ. ಯಾವುದೇ ಗುರಿ ಇಲ್ಲದೆ ನೌಕರಿ ಕಾಯುತ್ತಾ ಕುಳಿತರೆ ಅಭಿವೃದ್ಧಿ ಅಸಾಧ್ಯ. ಕಠಿಣ ಶ್ರಮ ಮತ್ತು ಪ್ರಾಮಾಣಿಕ ದುಡಿಮೆಯ ಗುರಿ ಇದ್ದಾಗ ದಲಿತರೂ ಉದ್ಯಮಿಗಳಾಗಲು ಸಾಧ್ಯ. ಸರ್ಕಾರ ದಲಿತ ಮತ್ತು ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಕರಿಗೆ ಆರ್ಥಿಕವಾಗಿ ಸಬಲರಾಗಲು ಸಹಕಾರ ನೀಡಬೇಕು ಎಂದರು.
ಬದಲಾವಣೆಗೆ ತಕ್ಕಂತೆ ಹೊಂದಿಕೊಳ್ಳುವುದನ್ನು ನಾವು ಕಲಿಯುತ್ತಿಲ್ಲ ಎಂದು ಅವರು ವಿಷಾದಿಸಿದರು. ವರ್ತಮಾನ ಬಳಗದ ಬಿ.ಶ್ರೀಪಾದ ಭಟ್ ಮಾತನಾಡಿದರು. ರವಿ ಕೃಷ್ಣಾರೆಡ್ಡಿ, ವಕೀಲ ಎಚ್.ಮೋಹನ್‌ಕುಮಾರ್, ಪ. ಜಾತಿ ಮತ್ತು ಪಂಗಡಗಳ ಉದ್ಯಮಿಗಳ ಸಂಘಟನೆ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಾಸ್, ಉದ್ಯಮಿಗಳಾದ ವಾಸು ಪ್ರಸಾದ್, ಬಾಲು, ಪಶು ವೈದ್ಯಾಧಿಕಾರಿ ಹಾಗೂ ಚಿಂತಕ ಡಾ. ರಘುಪತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.