ಮತದಾರರ ಮನವೊಲಿಸಲು ಕರೆ
ಟಿ. ನರಸೀಪುರ: ಮತದಾರರ ಮನಸ್ಸನ್ನು ಓಲೈಸುವಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಸಿದ್ಧರಾಗುವಂತೆ ಜಿಲ್ಲಾ ಉಪಾಧ್ಯಕ್ಷ ತೋಟದಪ್ಪ ಬಸವರಾಜು ಕರೆ ನೀಡಿದರು.
ಪಟ್ಟಣದ ಬಾಬು ಜಗಜೀವನರಾಂ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಬೂತ್ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿ, ಮುಂದಿನ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಮನೆಮನೆಗೆ ತೆರಳಿ ಮತದಾರರನ್ನು ಸಂಘಟಿಸಿ, ಅಭಿಪ್ರಾಯ ಪಡೆದು ಜನರಲ್ಲಿ ಬಿಜೆಪಿಯ ಬಗ್ಗೆ ಒಲುವು ಮೂಡಿಸಬೇಕು ಎಂದರು.
ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರ ಸರ್ಕಾರ 10 ವರ್ಷಗಳಿಂದ ಆಳ್ವಿಕೆ ನಡೆಸುವಲ್ಲಿ ವಿಫಲವಾಗಿದ್ದು, ದೇಶದ ಭದ್ರತೆಯನ್ನು ಕಾಪಾಡಿಕೊಳ್ಳುವಲ್ಲಿ ಪ್ರಧಾನಿ ವಿಫರಾಗಿರುವುದು ದೇಶದ ಜನತೆಗೆ ದುರದೃಷ್ಟ ಸಂಗತಿ. ಭ್ರಷ್ಟಚಾರವೇ ತುಂಬಿ ತುಳುಕುತ್ತಿರುವ ರಾಷ್ಟ್ರದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಉತ್ತಮ ಆಡಳಿತ ಮಾಡಲು ನರೇಂದ್ರಮೋದಿ ಅವರಂತಹ ವ್ಯಕ್ತಿ ಅನಿವಾರ್ಯ ಎಂದು ತಿಳಿಸಿದರು.
ಮೈಲ್ಯಾಕ್ ಮಾಜಿ ಅಧ್ಯಕ್ಷ ಮೈ.ವಿ.ರವಿಶಂಕರ್ ಉದ್ಘಾಟಿಸಿದರು. ಮಾಜಿ ಶಾಸಕ ಸಿ.ರಮೇಶ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಉಸ್ತುವಾರಿ ಎನ್.ವಿ.ಫಣೀಶ್, ಸಿಂಡಿಕೇಟ್ ಸದಸ್ಯ ದಾಸಯ್ಯ, ಹಿರಿಯ ಮುಖಂಡ ಕರೋಹಟ್ಟಿ ಮಹದೇವಯ್ಯ, ನೀಲಸೋಗೆ ಬಸವರಾಜು, ಬಸವರಾಜು, ಸಿದ್ದಮಲ್ಲಪ್ಪ, ಎನ್.ಎಂ. ರಾಮಚಂದ್ರ, ಎನ್. ಲೋಕೆಶ್, ವಾಟಾಳ್ ಮಹದೇವಪ್ಪ, ವಿಜಯ್‌ಕುಮಾರ್, ಎಸ್.ದಿಲೀಪ್, ಪ್ರಕಾಶ್, ಬಿ.ಪಿ.ಪರಶಿವಮೂರ್ತಿ ಇದ್ದರು.
ಲೋಕಾಯುಕ್ತರಿಂದ ದೂರು ಸ್ವೀಕಾರ
ಮೈಸೂರು: ಸಾರ್ವಜನಿಕ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಮನವಿ ಹಾಗೂ ದೂರುಗಳ ಪರಿಶೀಲನೆಯಲ್ಲಿ ಜರುಗುತ್ತಿರುವ ವಿಳಂಬ, ಅಧಿಕಾರ ದುರುಪಯೋಗ, ಸರ್ಕಾರಿ ಹಣದ ದುರುಪಯೋಗ, ದುರಾಡಳಿತ ಕುರಿತು ಜಿಲ್ಲೆಯ ಹುಣಸೂರಿನ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಸಾರ್ವಜನಿಕರು ಲೋಕಾಯುಕ್ತರಿಗೆ ದೂರು ಸಲ್ಲಿಸಬಹುದು.
ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ನಮೂನೆ- 1 ಹಾಗೂ 2ರಲ್ಲಿ ಸಲ್ಲಿಸುವ ದೂರು ಅರ್ಜಿಗಳನ್ನು ಸ್ವೀಕರಿಸಿ, ನೋಂದಾಯಿಸಿ ವಿಚಾರಣೆಗೆ ಒಳಪಡಿಸುವ ಕಾರ್ಯಕ್ರಮವನ್ನು ಜ. 27ರಿಂದ 29ರವರೆಗೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಏರ್ಪಡಿಸಲಾಗಿದೆ.
ರಾಜ್ಯದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ಅವರು ಜ.30ರ ಬೆಳಗ್ಗೆ 10ರಿಂದ ಸಂಜೆವರೆಗೆ ಹುಣಸೂರು ಪುರಸಭಾ ಕಚೇರಿ ಆವರಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ದೂರು ಅರ್ಜಿ ವಿಚಾರಣೆ ನಡೆಸುವರು.
ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿ ಸಲ್ಲಿಸಲಾದ ಹಾಗೂ ವಿಚಾರಣೆ ಹಂತಗಳಲ್ಲಿನ ಹುಣಸೂರು, ಕೆ.ಆರ್.ನಗರ, ಪಿರಿಯಾಪಟ್ಟಣ ಹಾಗೂ ಎಚ್.ಡಿ.ಕೋಟೆ ತಾಲೂಕುಗಳ ವ್ಯಾಪ್ತಿಯ ಅರ್ಜಿಗಳ ವಿಚಾರಣೆ ನಡೆಯಲಿದೆ. ನೊಂದ ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಉಪವಿಭಾಗಾಧಿಕಾರಿ ಬಸವರಾಜು ಕೋರಿದ್ದಾರೆ.
ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲೂ ಜ.27ರಿಂದ 30ರವರೆಗೆ ದೂರು ಸ್ವೀಕರಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

