ಮೈಸೂರು

ಸುರಕ್ಷಿತ ವಾಹನ ಚಾಲನೆಗೆ ಎಸ್ಪಿ ಸಲಹೆ

Published On :

ಕೆ.ಆರ್. ನಗರ: ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು, ಜತೆಗೆ ಕಾರು ಚಾಲಕರು ಬೆಲ್ಟ್ ಬಳಸಿ ಚಾಲನೆ ಮಾಡಿ ತಮ್ಮ ಅಮೂಲ್ಯವಾದ ಜೀವವನ್ನು ಕಾಪಾಡಿಕೊಳ್ಳುವ ಕೆಲಸ ಮಾಡಬೇಕು ಎಂದು ಎಸ್ಪಿ ಅಭಿನವ್ ಖರೆ ಹೇಳಿದರು.
ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಸೋಮವಾರ ರಸ್ತೆ ಸುರಕ್ಷತಾ ಸಪ್ತಾಹದ ಸಭೆಯಲ್ಲಿ ಮಾತನಾಡಿದ ಅವರು, ನಿಯಮಿತ ವೇಗದಲ್ಲಿಯೇ ವಾಹನ ಚಲಾಯಿಸಿ ಅಕ್ಕ-ಪಕ್ಕದ ಪ್ರಯಾಣಿಕರನ್ನು ಗಮನಿಸಿ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಬೇಕೆಂದು ಸಲಹೆ ನೀಡಿದರು.
ಅತಿವೇಗ ಜೀವಕ್ಕೆ ಮಾರಕವಾಗಿದ್ದು, ಎಲ್ಲರೂ ನಿಯಮಗಳನ್ನು ಪಾಲಿಸುವುದರ ಜತೆಗೆ ಇತರರಿಗೂ ಸಂಚಾರ ನಿಯಮಗಳ ಪಾಲನೆ ಬಗ್ಗೆ ಮತ್ತು ಅವುಗಳನ್ನು ಉಲ್ಲಂಘಿಸಿದರೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕೆಂದು ತಿಳಿಸಿದರು.
ಡಿವೈಎಸ್ಪಿ ಹರಿ ಬರಗೂರು ಮಾತನಾಡಿ, ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಪಾಲಿಸುವುದರ ಜತೆಗೆ ಪೊಲೀಸರೊಂದಿಗೆ ಸಹಕರಿಸಿ, ಅಪಘಾತ ರಹಿತ ಸಮಾಜ ನಿರ್ಮಾಣ ಮಾಡಲು ನೆರವು ನೀಡಬೇಕೆಂದು ಕೋರಿದರು. ತಹಸೀಲ್ದಾರ್ ಬಿ.ಎನ್. ವೀಣಾ, ತಾ. ಆರೋಗ್ಯಾಧಿಕಾರಿ ಡಾ.ಟಿ. ಶಿವಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ಜವರೇಗೌಡ ಮಾತನಾಡಿದರು.
ಕಾರ್ಯಕ್ರಮಕ್ಕೂ ಮೊದಲು ಗರುಡಗಂಭ ವೃತ್ತದಿಂದ ಪುರಸಭಾ ವೃತ್ತದವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಜಾಥಾ ನಡೆಸಿ, ಪಟ್ಟಣದಿಂದ ಅರ್ಕೇಶ್ವರ ದೇವಾಲಯದವರೆಗೆ ಆಫ್ ಮ್ಯಾರಾಥಾನ್ ಓಟ ಏರ್ಪಡಿಸಲಾಗಿತ್ತು.
ಸರ್ಕಲ್ ಇನ್ಸ್ಪೆಕ್ಟರ್ ಸಿದ್ದಯ್ಯ, ಎಸ್ಐಗಳಾದ ಎಂ. ಷಣ್ಮುಗಂ, ಮಹೇಶ್, ಎಎಸ್ಐ ಬೋರಶೆಟ್ಟಿ, ಶಿವಕುಮಾರ್, ಸೋಮಶೇಖರ್, ಪರಶುರಾಮ್, ರಮೇಶ್, ರಾಮಚಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.