ಅಂಗವೈಕಲ್ಯ ನಿರ್ಮೂಲನೆಗೆ ಪೋಲಿಯೊ ಹಾಕಿಸಿ: ಡಾ.ಕಿರಣ್
ಹುಣಸೂರು: ಮಕ್ಕಳಲ್ಲಿ ಪೋಲಿಯೊ ಜನ್ಯ ಅಂಗವೈಕಲ್ಯ ನಿರ್ಮೂಲನೆಗೆ ಹನಿ ಹಾಕುವ ಮೂಲಕವೇ ಕಾರ್ಯ ಪ್ರವೃತ್ತರಾಗಬೇಕು. ಅಂಗವೈಕಲ್ಯಕ್ಕೆ ಪೋಲಿಯೋ ಮಾತ್ರ ಕಾರಣವಾಗಿರದೆ ಇತಪೆ ಕಾರಣಗಳೂ ಇರುವುದರಿಂದ ಆ ಬಗ್ಗೆಯೂ ಹೆಚ್ಚಿನ ಗಮನ ಹರಿಸಬೇಕು ಎಂದು ತಾಲೂಕಿನ ಕರಿಮುದ್ದನ ಹಳ್ಳಿ ಪ್ರಾಥಮಿಕ ಆರೋಗ್ಯ ಘಟಕದ ವೈದ್ಯಾಧಿಕಾರಿ ಡಾ. ಕಿರಣ್ ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಗ್ರಾಪಂ, ಹುಣಸೂರು ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ನಡೆದ ಪಲ್ಸ್ ಪೋಲಿಯೊ ಜಾಗೃತಿ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಗ್ರಾಮಸ್ಥರಿಗೆ ತಿಳಿವಳಿಕೆ ನೀಡಿದ ಅವರು, ಕಾಯಿಲೆಗಳಿಂದ ಮುಕ್ತವಾಗಿ ಉಳಿಯಬೇಕಾದರೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಮುಖ್ಯ ಎಂದು ಪ್ರತಿಪಾದಿಸಿದರು. ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ಟಿ.ಸಿ. ಪೂರ್ಣಿಮಾ ಪಲ್ಸ್ ಪೋಲಿಯೋ ಬಗ್ಗೆ ಜನ ಜಾಗೃತಿ ಮೂಡಿಸುವಲ್ಲಿ ಗ್ರಾಮಸ್ಥರೂ ಸಹಭಾಗಿಗಳಾಗಿ ಪಾಲ್ಗೊಂಡು ತಮಗೆ ತಿಳಿದ ವಿಷಯವನ್ನು ಇತರರಿಗೂ ತಿಳಿಯಪಡಿಸಬೇಕು ಎಂದು ಸಲಹೆ ನೀಡಿದರು.
ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಕಾರ್ಯಕ್ರಮ ಉದ್ಘಾಟಿಸಿ, ಮಗುವೊಂದಕ್ಕೆ ಪೋಲಿಯೋ ಹನಿಹಾಕಿದರು. ಪಿಡಿಒ ಸಣ್ಣೇಗೌಡ, ವೈದ್ಯಕೀಯ ಸಹಾಯಕಿ ಶಿಲ್ಪಾ ಮೋಳಿ, ಗ್ರಾಪಂ ಕಾರ್ಯದರ್ಶಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದವರು, ಗ್ರಾಮಸ್ಥರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

