ಮೈಸೂರು

ಅಗ್ನಿ ದುರಂತ ನಿಯಂತ್ರಿಸಲು ಸಂದೇಶ್ ಸ್ವಾಮಿ ಒತ್ತಾಯ

Published On :

ಮೈಸೂರು: ನಗರದ ಹಲವೆಡೆ ಮೇಲಿಂದ ಮೇಲೆ ಸಂಭವಿಸುತ್ತಿರುವ ಅಗ್ನಿ ಅವಘಡಗಳನ್ನು ನಿಯಂತ್ರಿಸಬೇಕು ಎಂದು ಮಾಜಿ ಮೇಯರ್ ಸಂದೇಶ್ ಸ್ವಾಮಿ ಒತ್ತಾಯಿಸಿದ್ದಾರೆ.
ಆಗಿಂದಾಗ್ಗೆ ಸಂಭವಿಸುತ್ತಿರುವ ಅಗ್ನಿ ಅವಘಡಗಳಿಂದ ಆಸ್ತಿ ನಷ್ಟ ಮತ್ತು ಪ್ರಾಣ ಹಾನಿ ಆಗುತ್ತಿದೆ. ಕೆಲ ದಿನಗಳ ಹಿಂದೆ ಗಾಯಿತ್ರಿಪುರಂ ಬಡಾವಣೆಯಲ್ಲಿ ಹುಲ್ಲಿನ ಮೆದೆಗೆ ಬಿಂಕಿ ತಗುಲಿ ಅಕ್ಕಪಕ್ಕದ ಮನೆಗೂ ಹಾನಿ ಉಂಟಾಗಿತ್ತು. ಅಲ್ಲದೆ ಖಾಲಿ ನಿವೇಶನಗಳಲ್ಲಿ ಬೆಳೆದ ಹುಲ್ಲಿಗೂ ಬೆಂಕಿ ತಗುಲಿ ಹಾನಿ ಉಂಟಾಗುತ್ತಿದೆ. ಇಂತಹ ಪ್ರದೇಶದಲ್ಲಿಯೆ ಪೆಟ್ರೋಲ್ ಬಂಕ್ಗಳು ಮತ್ತು ಗ್ಯಾಸ್ ರೀ ಫಿಲ್ಲಿಂಗ್ ಪಂಪ್ಗಳಿವೆ. ಆದ್ದರಿಂದ ಹೆಚ್ಚಿನ ಅನಾಹುತ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ನಗರದ ಅನೇಕ ಹೊಟೇಲ್ಗಳು, ಬೇಕರಿಗಳು, ಅಂಗಡಿ ಮಳಿಗೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆದರೂ ನಗರ ಪಾಲಿಕೆ ಆಗಲಿ ಅಥವಾ ಪೊಲೀಸ್ ಇಲಾಖೆ ಆಗಲಿ ಯಾವುದೆ ಕ್ರಮ ಕೈಗೊಂಡಿಲ್ಲ. ದುರಂತ ಸಂಭವಿಸಿದ ಬಳಿಕ ಕ್ರಮ ಕೈಗೊಳ್ಳುವ ಬದಲು, ಬೆಂಕಿ ಅವಘಡಕ್ಕೆ ಕಾರಣ ಏನೆಂಬುದನ್ನು ಕಂಡುಹಿಡಿದು, ಮುಂಜಾಗ್ರತೆ ವಹಿಸುವುದು ಉತ್ತಮ. ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ನಿವೇಶನದ ಮಾಲೀಕರಿಗೆ ಸೂಚನೆ ನೀಡಬೇಕು.
ದೊಡ್ಡ ಕಟ್ಟಡಗಳು, ಹೊಟೇಲ್ ಮಾಲೀಕರಿಗೆ ನೊಟೀಸ್ ಜಾರಿಗೊಳಿಸಿ ಸೂಕ್ತ ಮುಂಜಾಗ್ರತೆ ವಹಿಸುವಂತೆ ಸೂಚಿಸಬೇಕು. ಆಗ ಮಾತ್ರ ಇಂತಹ ದುರಂತಗಳನ್ನು ನಿಯಂತ್ರಿಸಲು ಸಾಧ್ಯ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.