ಕಾಡಾನೆ ಭೀತಿ ಬಿಡಿ: ಅರಣ್ಯಾಧಿಕಾರಿ ಅಭಯ
ಸರಗೂರು: ಸಮೀಪದ ಹಂಚೀಪುರ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದ ಹಿನ್ನೆಲೆಯಲ್ಲಿ ವಲಯ ಅರಣ್ಯ ಅಧಿಕಾರಿ ಶಂಕರೇಗೌಡ ಭೇಟಿ ನೀಡಿ ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿದರು.
ಕಾಡಾನೆಗಳು ಹಾಡು ಹಗಲೇ ಗ್ರಾಮಕ್ಕೆ ನುಗ್ಗುತ್ತಿವೆ, ಬೆಳೆದ ಫಸಲೆಲ್ಲ ಕಾಡಾನೆ ಪಾಲಾಗುತ್ತಿದೆ. ಗ್ರಾಮಗಳಿಂದ ಸರಗೂರಿಗೆ ಬೆಳಿಗ್ಗೆ ಸಂಜೆ ತಿರುಗಾಡಲು ಶಾಲಾ ಮಕ್ಕಳು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಕಾಡಾನೆಗಳ ಹಾವಳಿ ತಡೆಗಟ್ಟಬೇಕು. ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡ ಗಣಪತಿ ತಿಳಿಸಿದರು. ವಲಯ ಅರಣ್ಯ ಅಧಿಕಾರಿ ಶಂಕರೇಗೌಡ ಮಾತನಾಡಿ, ಕಾಡಾನೆಗಳನ್ನು ಕಾಡಿಗೆ ಓಡಿಸಲು ಇಂದಿನಿಂದಲೆ ಕೆಲಸ ಮಾಡಲಾಗುತ್ತದೆ. ನಮ್ಮ ಸಿಬ್ಬಂದಿಯನ್ನು ರಾತ್ರಿ ಗಸ್ತಿನಲ್ಲಿ ಕೆಲಸ ಮಾಡಿಸಲಾಗುತ್ತದೆ. ರೈತರು ಸಹಕರಿಸಬೇಕೆಂದು ಕೋರಿದರು.
ತಾ. ವೀರಶೈವ ಸಮಾಜದ ಅಧ್ಯಕ್ಷ ಮಹದೇವಪ್ಪ, ರೈತ ಮುಖಂಡ ಗಣಪತಿ, ಆನಂದ, ನಟರಾಜ, ಮಣಿಕುಮಾರ್, ಸರಗೂರು ಠಾಣೆ ಎಎಸ್ಐ ಚಲುವಾಚಾರಿ, ಪೇದೆ ಭಾಸ್ಕರ್, ಆನಂದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

