ಮೈಸೂರು

ಮಾಜಿ ಶಾಸಕ ಪುಟ್ಟರಾಜುಗೆ ಸನ್ಮಾನ

Published On :

ಮೂಗೂರು: ಕ್ಷೇತ್ರದ ಶಾಸಕರ ಸಹಕಾರದೊಂದಿಗೆ ಮೂಗೂರು ತ್ರಿಪುರ ಸುಂದರಿ ಅಮ್ಮನವರ ಪುಣ್ಯ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳುವುದಾಗಿ ಮೇಲುಕೋಟೆ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು. ಮೂಗೂರು ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಾಯೋಜಕರಾದ ಸಿ.ಎಸ್.ಪುಟ್ಟರಾಜು ಅವರನ್ನು ಗ್ರಾಮದ ಮುಖಂಡರು ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿಯೂ ಅಮ್ಮನವರ ಸೇವೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವುದು ಸ್ಥಳೀಯ ಮುಖಂಡರ ಸಹಕಾರದಿಂದ ಸಾಧ್ಯವಾಗುತ್ತಿದೆ. ಜನಪ್ರತಿನಿಧಿಗಳ ಅನುದಾನವನ್ನು ಕ್ರೋಢೀಕರಿಸಿ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯವನ್ನು ಒದಗಿಸಿ ದೇವಾಲಯ ಅಭಿವೃದ್ಧಿ ಪಡಿಸುವ ಇಂಗಿತ ವ್ಯಕ್ತಪಡಿಸಿ ಮಾತನಾಡಿದರು. ನಂತರ ದೇವಾಲಯದಲ್ಲಿ ನಡೆದ ಅಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿದರು.
ಮುಖಂಡ ಎಂ.ಡಿ.ಬಸವರಾಜು, ದೇವಸ್ಥಾನದ ಪಾರುಪತ್ತೇಗಾರ ನಾಗೇಂದ್ರ, ಮೂಗೂರು ಕುಮಾರಸ್ವಾಮಿ, ರಮೇಶ್ ನಾಯ್ಕ, ಅರ್ಚಕ ಎಂ.ಡಿ.ಸುಂದ್ರಪ್ಪ, ಎಂ.ಬಿ. ಸಾಗರ್, ಸತೀಶ್ಗೌಡ, ನಂಜುಂಡ, ಮೂಗೂರು ಕಾಂತೇಶ್, ಮಾದುರಾಜ್, ನಂಜುಂಡ, ಮಾಜಿ ಉಪಾಧ್ಯಕ್ಷ ಎಸ್.ಮಹದೇವಸ್ವಾಮಿ, ಎಂ.ಡಿ.ಬಸವರಾಜು ಅಭಿಮಾನಿ ಬಳಗ, ಕನ್ನಡ ಸ್ನೇಹ ಬಳಗದ ಪದಾಧಿಕಾರಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.