ಶಿಕ್ಷಕ ವೃಂದಕ್ಕೆ ಹಿಡಿದಿದೆವರ್ಗಾವಣೆ ಭೂತ: ಸಚಿವ
ನಂಜನಗೂಡು: ಸರ್ಕಾರಿ ಶಾಲೆಯ ಶಿಕ್ಷಕರು ವರ್ಗಾವಣೆಯ ಭೂತ ಹಿಡಿಸಿಕೊಂಡು ಅಲೆದಾಡುತ್ತಿದ್ದಾರೆ ಎಂದು ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ವಿಷಾದಿಸಿದರು.
ಸೋಮವಾರ ನಡೆದ ಪಟ್ಟಣದ ಬಾಲಕರ ಪದವಿ ಪೂರ್ವ ಕಾಲೇಜಿನ ಕ್ರೀಡಾ ಸಾಂಸ್ಕೃತಿಕ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗಾಗಿ ಶಾಲೆಗಳಿಗೆ ಕೋಟಿ ಕೋಟಿ ಹಣ ನೀಡುತ್ತಿದೆ. ಆದರೂ ಶಿಕ್ಷಣ ಮಟ್ಟ ವೃದ್ಧಿಯಾಗುತ್ತಿಲ್ಲ. ಪೋಷಕರು ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಕಳೆದುಕೊಳ್ಳುತ್ತಿರುವುದರಿಂದ ಅನೇಕ ಶಾಲೆಗಳು ಮುಚ್ಚುವ ಹಂತ ತಲುಪಿವೆ ಎಂದರು.
ಉಚಿತ ಶಿಕ್ಷಣ, ಬಿಸಿಯೂಟ, ಕ್ಷೀರಭಾಗ್ಯ, ಸೈಕಲ್, ಸಮವಸ್ತ್ರ ಪಠ್ಯಪುಸ್ತಕಗಳೂ ಸೇರಿದಂತೆ ವೇತನವನ್ನು ಸಹ ಸರ್ಕಾರ ನೀಡುತ್ತಿದೆ. ಈ ಎಲ್ಲ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಮೌಲ್ಯವನ್ನು ಹೆಚ್ಚಿಸಬೇಕಾದ ಶಿಕ್ಷಕರು ವರ್ಗಾವಣೆ ಭೂತವನ್ನು ಹಿಡಿಸಿಕೊಂಡು ಕರ್ತವ್ಯ ಮರೆತು ಅಲೆದಾಡುತ್ತಿದ್ದಾರೆ. ಇದರಿಂದಾಗಿಯೇ ಸರ್ಕಾರಿ ಶಾಲೆಗಳ ಸ್ಥಿತಿ ಚಿಂತಾಜನಕವಾಗಿದೆ ಎಂದರು. ಮುಂದಿನ ವರ್ಷದಿಂದ ಬಾಲಕರ ಕಾಲೇಜಾಗಿ ಮುಂದುವರಿಯಲಿದೆ. ಆರ್.ಪಿ. ರಸ್ತೆಯಲ್ಲಿರುವ ನಾಗಮ್ಮ ಶಾಲೆ ಆವರಣದಲ್ಲಿ ಸುಸಜ್ಜಿತವಾದ ಬಾಲಕಿಯರ ಪಿಯು ಕಾಲೇಜು ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದರು.
ಪದವಿ ಪೂರ್ವಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎಂ. ಪುಟ್ಟು, ಉಪನ್ಯಾಸಕ ಎಸ್. ಬಾಲಸುಬ್ರಹ್ಮಣ್ಯಂ, ಪುರಸಭಾ ಸದಸ್ಯ ಕೆ.ಜಿ. ಆನಂದ, ಕಾಲೇಜು ಅಭಿವೃದ್ಧಿ ಸಮಿತಿಯ ಖಚಾಂಚಿ ರಾಂಪ್ರಸಾದ್, ಸದಸ್ಯ ನಂಜುಂಸ್ವಾಮಿ, ಹಲಿಮಾಬಿ, ಪ್ರಾಚಾರ್ಯ ಫರಿದಾ ಬೇಗಂ, ಉಪ ಪ್ರಾರ್ಚಾ ಅಭಿನಂದನಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

