ಹಾಲು ಉತ್ಪಾದಕರ ಸಂಘಕ್ಕೆ ಬೀಗ ಹಾಕಿ ಪ್ರತಿಭಟನೆ
ಸಾಲಿಗ್ರಾಮ: ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಟ್ಟಿರುವುದನ್ನು ಹಾಗೂ ಆಡಳಿತ ಮಂಡಳಿಯ ಕಾರ್ಯವೈಖರಿಯನ್ನು ಖಂಡಿಸಿ, ಸಾರ್ವಜನಿಕರು, ಷೇರುದಾರರು ಮತ್ತು ಉತ್ಪಾದಕರು ಮಂಗಳವಾರ ಸಮೀಪದ ಲಕ್ಕೀಕುಪ್ಪೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.
ಸಂಘದ ಆಡಳಿತ ಮಂಡಳಿಗೆ ಚುನಾವಣೆಯನ್ನು ಫೆ.2ರಂದು ನಡೆಸಲು ಸಹಕಾರ ಇಲಾಖೆಯಿಂದ ಅಧಿಕೃತ ಪ್ರಕಟಣೆಗೊಂಡ ವಿಷಯ ತಿಳಿದ ನಂತರ, ಈ ಅವಾಂತರ ಜರುಗಿದೆ. ಸಂಘದಲ್ಲಿ ಇದುವರೆಗೂ ಯಾವುದೇ ಸದಸ್ಯರಿಗೆ ಲಾಭಾಂಶ ನೀಡಿಲ್ಲ. ಸಂಘದ ಲೆಕ್ಕಪತ್ರಗಳನ್ನು ನೀಡಿಲ್ಲ. ಈ ಬಗ್ಗೆ ಮಾಹಿತಿ ಕೇಳಲು ಹೋದ ಜನರಿಗೆ ಸಂಘದ ಕಾರ್ಯದರ್ಶಿ ಮಂಜುನಾಥ ಬೇಜವಾಬ್ದಾರಿ ಉತ್ತರ ನೀಡಿ, ಹಾಲು ಉತ್ಪಾದಕರು ಮತ್ತು ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಸದಸ್ಯರು ಆರೋಪಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಸಂಘಕ್ಕೆ ಭೇಟಿ ನೀಡಿ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
ಶ್ರೀಕಂಠೇಗೌಡ, ಸಣ್ಣತಮ್ಮೇಗೌಡ, ಎಲ್.ಟಿ.ರಾಮೇಗೌಡ, ಮಂಜುನಾಥ್, ಅಶೋಕ್, ಶಿವಕುಮಾರ್, ಮಹೇಶ್, ಉಮೇಶ್, ರಮೇಶ್, ಪುಟ್ಟಸ್ವಾಮೀಗೌಡ, ಶಿವಣ್ಣೇಗೌಡ, ಕೃಷ್ಣ, ಲೋಕೇಶ್, ಆಂಜನೀಗೌಡ, ಮನೋಜ್ಕುಮಾರ್, ಗಣೇಶ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

