ಮೈಸೂರು

ಉಪ ಲೋಕಾಯುಕ್ತರಿಂದ ದೂರು ವಿಚಾರಣೆ

Published On :

ಮೈಸೂರು: ಕರ್ನಾಟಕ ರಾಜ್ಯದ ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ. ಅಡಿ ಅವರು ಜ.30ರ ಬೆಳಗ್ಗೆ 10 ರಿಂದ ಸಂಜೆಯವರೆಗೆ ಹುಣಸೂರು ಪುರಸಭಾ ಕಚೇರಿಯ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದೂರು ಅರ್ಜಿಗಳ ವಿಚಾರಣೆ ನಡೆಸುವರು ಎಂದು ಜಿಲ್ಲಾಧಿಕಾರಿ ಸಿ.ಶಿಖಾ ತಿಳಿಸಿದ್ದಾರೆ.
ಆ ದಿನದಂದು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ನಮೂನೆ-1 ಹಾಗೂ 2ರಲ್ಲಿ ಸಲ್ಲಿಸಲಾಗಿರುವ ಹಾಗೂ ವಿಚಾರಣೆ ಹಂತಗಳಲ್ಲಿರುವ ಹುಣಸೂರು, ಕೆ.ಆರ್. ನಗರ, ಪಿರಿಯಾಪಟ್ಟಣ ಹಾಗೂ ಎಚ್.ಡಿ. ಕೋಟೆ ತಾಲೂಕು ವ್ಯಾಪ್ತಿಯ ಅರ್ಜಿಗಳ ವಿಚಾರಣೆಯನ್ನು ಅವರು ನಡೆಸುವರು. ಅಲ್ಲದೆ, ಉಪ ಲೋಕಾಯುಕ್ತರು ಜ.31ರ ಬೆಳಗ್ಗೆ 10 ರಿಂದ ಸಂಜೆಯವರೆಗೆ ನಗರದ ಲಲಿತಮಹಲ್ ರಸ್ತೆಯಲ್ಲಿರುವ ಪೊಲೀಸ್ ಭವನದಲ್ಲಿ ದೂರು ಅರ್ಜಿಗಳ ವಿಚಾರಣೆ ನಡೆಸುವರು. ಆ ದಿನದಂದು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ನಮೂನೆ-1 ಹಾಗೂ 2ರಲ್ಲಿ ಸಲ್ಲಿಸಲಾಗಿರುವ ಹಾಗೂ ವಿಚಾರಣೆ ಹಂತಗಳಲ್ಲಿರುವ ಮೈಸೂರು ನಗರ, ಮೈಸೂರು, ಟಿ.ನರಸೀಪುರ ಹಾಗೂ ನಂಜನಗೂಡು ತಾಲೂಕುಗಳ ವ್ಯಾಪ್ತಿಯ ಅರ್ಜಿಗಳ ವಿಚಾರಣೆಯನ್ನು ಅವರು ನಡೆಸುವರು.
ಸಾರ್ವಜನಿಕ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಮನವಿ ಹಾಗೂ ದೂರುಗಳ ಪರಿಶೀಲನೆಯಲ್ಲಿ ಜರುಗುತ್ತಿರುವ ವಿಳಂಬ, ಅಧಿಕಾರ ದುರುಪಯೋಗ, ಸರ್ಕಾರಿ ಹಣದ ದುರುಪಯೋಗ, ದುರಾಡಳಿತ, ಭ್ರಷ್ಟಾಚಾರ ಇತ್ಯಾದಿಗಳ ಬಗ್ಗೆ ಜ.27 ರಿಂದ 29ರವರೆಗೆ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಮೈಸೂರು ಜಿಲ್ಲೆಯ ಹುಣಸೂರು ಟೌನ್ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಹಾಗೂ ಜ.27 ರಿಂದ 30ರವರೆಗೆ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ದಿವಾನ್ಸ್ ರಸ್ತೆಯಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಅವರ ಕಚೇರಿಯಲ್ಲಿ ಸಾರ್ವಜನಿಕರು ಕರ್ನಾಟಕ ಲೋಕಾಯುಕ್ತ ಕಾಯ್ದೆ 1948ರ ಅಡಿಯಲ್ಲಿ ನಮೂನೆ-1 ಹಾಗೂ 2 ರಲ್ಲಿ ಸಲ್ಲಿಸುವ ದೂರು ಅರ್ಜಿಗಳನ್ನು ಸ್ವೀಕರಿಸಿ, ನೋಂದಾಯಿಸಿ ವಿಚಾರಣೆಗೆ ಒಳಪಡಿಸುವ ಕಾರ್ಯಕ್ರಮವನ್ನು ಏರ್ಪಡಿಸಿದೆ.
ನೊಂದ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.