ಮೈಸೂರು

ದೌರ್ಜನ್ಯಕ್ಕೆ ಬಡತನ, ಅನಕ್ಷರತೆ ಕಾರಣ'

Published On :

ಟಿ. ನರಸೀಪುರ: ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಇದಕ್ಕೆ ಬಡತನ ಹಾಗೂ ಅನಕ್ಷರತೆ ಮುಖ್ಯ ಕಾರಣ ತಾ. ಹಿರಿಯ ಸಿವಿಲ್ ನ್ಯಾಯಾಧೀಶ ಸಿ. ಚಂದ್ರಶೇಖರ್ ಹೇಳಿದರು.
ಪಟ್ಟಣದ ಗುರು ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ನಿಯಮ 2006ರ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಉತ್ತಮ ಶಿಕ್ಷಣ ಪಡೆದುಕೊಳ್ಳುವುದರ ಜೊತೆಗೆ ಮಕ್ಕಳಿಗೆ ಅಪ್ರಾಪ್ತ ವಯಸ್ಸಿನಲ್ಲಿ ಮದುವೆ ಮಾಡುವುದರಿಂದ ಹಾಗೂ ದೌರ್ಜನ್ಯಕ್ಕೆ ಒಳಗಾಗಬಹುದಲ್ಲದೆ, ಮಾನಸಿಕ ಒತ್ತಡಕ್ಕೆ ಬಲಿಯಾಗಬಹುದಾದ ಸಂದರ್ಭಗಳು ಹೆಚ್ಚಾಗಲಿವೆ. ಸರ್ಕಾರ ಮಹಿಳೆಯರ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಮಹಿಳೆಯರು ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.
ಸಿಡಿಪಿಒ ಬಸವರಾಜು ಮಾತನಾಡಿದರು. ಕಿರಿಯ ಶ್ರೇಣಿ ನ್ಯಾಯಾಧೀಶ ಬಿ.ಜಿ. ದಿನೇಶ್, ವಕೀಲರ ಸಂಘದ ಅಧ್ಯಕ್ಷ ನಾಗಭೂಷಣ್ ಮೂರ್ತಿ, ಮಾದಪ್ಪ, ರವಿಶಂಕರ್, ಉಮೇಶ್, ಉದಯಕುಮಾರ್, ಶ್ರೀನಿಧಿ, ಸುಮಿತ್ರಾ, ಸೌಭಾಗ್ಯ, ರತ್ನಮ್ಮ ಇದ್ದರು.


ನಿಗೂಢವಾಗಿ ಮೃತಪಟ್ಟ ಕಾರ್ಮಿಕ
ಪಿರಿಯಾಪಟ್ಟಣ: ವ್ಯಕ್ತಿಯೊಬ್ಬರು ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬೆಕ್ಕರೆ ಗ್ರಾಮದಲ್ಲಿ ಬುಧವಾರ ಸಂಜೆ ಜರುಗಿದೆ. ಗ್ರಾಮದ ನಿವಾಸಿ ರವಿ (35) ಮೃತ ವ್ಯಕ್ತಿ. ಈತ ಕೂಲಿ ಕಾರ್ಮಿಕನಾಗಿದ್ದು, ಆತನ ಮೃತದೇಹ ಗ್ರಾಮದ ಸರ್ಕಾರಿ ಶಾಲೆಯ ಎದುರಿನ ನೀರಿನ ಟ್ಯಾಂಕ್ ಬಳಿಯ ಬೇಲಿಯಲ್ಲಿ ಪತ್ತೆಯಾಗಿದೆ. ಪತಿಯ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ರವಿಯ ಪತ್ನಿ ಅಕ್ಕಮ್ಮ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಎಸ್ಐ ಜಿ.ಜೆ. ಸತೀಶ್ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.