ನಾಳೆಯಿಂದ ಮನೆ ಮನೆಗೆ ಬಿಜೆಪಿ ಅಭಿಯಾನ
ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮನೆ ಮನೆಗೆ ಬಿಜೆಪಿ ಎಂಬ ಅಭಿಯಾನ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಲೋಹ ಸಂಗ್ರಹ ಕಾರ್ಯಕ್ರಮವನ್ನು ಜ.25 ರಿಂದ ಬಿಜೆಪಿ ಹಮ್ಮಿಕೊಂಡಿದೆ.
ಜ.25ರ ಬೆಳಗ್ಗೆ 9.30ಕ್ಕೆ ಪಿರಿಯಾಪಟ್ಟಣ ತಾಲೂಕಿನ ಚಿಟ್ಟೇನಹಳ್ಳಿ ಗ್ರಾಮದಲ್ಲಿ ಮತದಾರರ ದಿನ ಹಾಗೂ ಈ ಅಭಿಯಾನ ಆರಂಭವಾಗಲಿದೆ ಎಂದು ಪಿರಿಯಾಪಟ್ಟಣ ತಾಲೂಕು ಬಿಜೆಪಿ ಅಧ್ಯಕ್ಷ ಆರ್.ಟಿ ಸತೀಶ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜ.25 ರಿಂದ 28 ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಯುಪಿಎ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯ ಸರ್ಕಾರದ ವೈಪಲ್ಯಗಳನ್ನು ಎತ್ತಿ ಹಿಡಿಯುವ ಕರಪತ್ರಗಳನ್ನು ವಿತರಿಸಲಾಗುವುದು. ಎನ್ಡಿಎ ಸರ್ಕಾರದ ಸಾಧನೆಗಳು ಹಾಗೂ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಸಾಧನೆಗಳನ್ನು ಒಳಗೊಂಡ ಕರಪತ್ರವನ್ನೂ ವಿತರಿಸಲಾಗುವುದು. ತಾಲೂಕಿನ ಸುಮಾರು 40 ಸಾವಿರ ಮನೆಗೆ ಭೇಟಿ ನೀಡಲಾಗುವುದು ಎಂದರು.
ಮಾಜಿ ಸಚಿವ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಸಭೆಗಳನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಈ ಸಂದರ್ಭದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗಾಗಿ ಲೋಹ ಸಂಗ್ರಹ ಹಾಗೂ ಯುವ ಮತದಾರರ ಜಾಗೃತಿ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು.
ಮುಖಂಡರಾದ ಲೋಕಪಾಲಯ್ಯ, ಎಂ.ಎಂ. ರಾಜೇಗೌಡ, ಪುಟ್ಟಸ್ವಾಮಿ. ಕೆ.ಕೆ. ಶಶಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

