ಸಹಕಾರ ಕ್ಷೇತ್ರದಲ್ಲಿಯೂ ಮೀಸಲಾತಿ ತರಲು ಆಗ್ರಹ
ಮೈಸೂರು: ಸಹಕಾರ ಕ್ಷೇತ್ರದಲ್ಲಿ ಮೀಸಲಾತಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಜ.26 ರಂದು ಅಹೋರಾತ್ರಿ ಧರಣಿಯನ್ನು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಮ್ಮಿಕೊಂಡಿದೆ.
ಎಲ್ಲ ಬಡವರ್ಗಗಳಿಗೂ ಮೀಸಲಾತಿ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕೆಂದು ಸಂವಿಧಾನದಲ್ಲಿ ಹೇಳಿದ್ದರೂ, ಹಲವಾರು ಕ್ಷೇತ್ರಗಳಲ್ಲಿ ಇನ್ನೂ ಕೂಡ ಮೀಸಲಾತಿ ಮಾರ್ಗಸೂಚಿ ಅನುಸರಿಸುತ್ತಿಲ್ಲ. ಅದರಲ್ಲಿ ಸಹಕಾರ ಕ್ಷೇತ್ರವೂ ಒಂದು ಎಂದು ದಸಂಸ ಜಿಲ್ಲಾ ಸಂಚಾಲಕ ದೇವಗಳ್ಳಿ ಸೋಮಶೇಖರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಲಿಷ್ಠರು, ಪ್ರಬಲರು ಹಾಗೂ ದಬ್ಬಾಳಿಕೆ ನಡೆಸುವವರು ಮಾತ್ರ ಸಹಕಾರ ಕ್ಷೇತ್ರ ನಿಯಂತ್ರಿಸುತ್ತಿದ್ದಾರೆ. ಅಂಥವರು ಸಮಾಜದಲ್ಲಿ ನಾಯಕರಾಗುತ್ತಿದ್ದಾರೆ. ಅವರು ಸಾಯುವ ತನಕ ಆ ಕ್ಷೇತ್ರದಲ್ಲಿ ಮುಂದುವರಿಯುವುದರ ಜತೆಗೆ ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಅದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆ ಕ್ಷೇತ್ರವನ್ನು ತಮ್ಮ ಪಿತ್ರಾರ್ಜಿತ ಆಸ್ತಿಯನ್ನಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ದಲಿತರು, ಬಡವರು, ಶೋಷಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರಿಗೆ ಅವಕಾಶ ಇಲ್ಲದಂತಾಗಿದೆ. ಸಾವಿರಾರು ಕೋಟಿ ರು. ಸರ್ಕಾರಿ ಹಣ ಕೆಲವೇ ಮಂದಿಗಳ ಪಾಲಾಗುತ್ತಿದೆ. ಆದ್ದರಿಂದ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಲು ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.
ಮುಖಂಡರಾದ ಬೆಲವತ್ತ ರಾಮಚಂದ್ರ, ಮಲ್ಲಹಳ್ಳಿ ನಾರಾಯಣ, ರಾಜಶೇಖರ ಕೋಟೆ, ರಂಗಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

