ಅತಿಥಿ ಉಪನ್ಯಾಸಕರಿಂದ ತರಗತಿ ಬಹಿಷ್ಕಾರ
ಕೆ.ಆರ್. ನಗರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಾಲೇಜಿನ ಆವರಣದಲ್ಲಿ ಪ್ರತಿಭಟಿಸಿದರು.
ಪ್ರತಿಭಟನಾ ಧರಣಿ ನಡೆಸಿದ 50ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು, ದೀರ್ಘ ಕಾಲದಿಂದಲೂ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಕಾಯಂಗೊಳಿಸಬೇಕು, ಯುಜಿಸಿ ನಿಯಮಾವಳಿ ಹಾಗೂ ಶಿಫಾರಸಿನಂತೆ 25 ಸಾವಿರ ವೇತನವನ್ನು ತಕ್ಷಣದಿಂದಲೆ ಜಾರಿಗೆ ತರಬೇಕು, ಜತೆಗೆ ಮುಂದಿನ ಶೈಕ್ಷಣಿಕ ವರ್ಷದಲ್ಲೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನೇ ಮುಂದುವರಿಸಬೇಕು. ಪ್ರತಿ ತಿಂಗಳು ವೇತನವನ್ನು ತಪ್ಪದೆ ನೀಡಬೇಕೆಂದು ಒತ್ತಾಯಿಸಿದರು.
ಈ ಎಲ್ಲ ಬೇಡಿಕೆಗಳನ್ನು ಜ.27ರೊಳಗೆ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಧರಣಿ ಮಾಡುವುದರ ಜತೆಗೆ, ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಅವರು ತಿಳಿಸಿದರು.
ಶಾಸಕರ ಬೆಂಬಲ: ಕೆ.ಆರ್. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂದೆ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಪ್ರತಿಭಟನೆಗೆ ಶಾಸಕ ಸಾ.ರಾ.ಮಹೇಶ್ ಬೆಂಬಲ ಸೂಚಿಸಿದರು. ಪ್ರತಿಭಟನಾ ನಿರತರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ನಿಮ್ಮ ಹೋರಾಟಕ್ಕೆ ನನ್ನ ಸಹಮತವಿದ್ದು, ಈ ಬಗ್ಗೆ ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಎಸ್ಎಫ್ಐ ಮತ್ತು ಡಿಎಫ್ಐ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದೆ.
ಅತಿಥಿ ಉಪನ್ಯಾಸಕರಾದ ಕೆ.ಎಲ್. ರಮೇಶ್, ಎಚ್.ಎಸ್. ಮಂಜುನಾಥ್, ಕರಿಯಪ್ಪ, ಬಿ.ಸಿ. ಕುಮಾರ್, ದಿವಾಕರ್, ಎನ್.ಸಿ. ಶಿವಕುಮಾರ್, ಮಹದೇವ್, ಗೌರೀಶ್, ಮೋನಿಕಾ, ಕೃಷ್ಣ, ಪಾಪಣ್ಣ, ಹರೀಶ್, ಬಸವರಾಜು, ನವೀನ್ಕುಮಾರ್, ಶಿವಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

