ಮೈಸೂರು

ರಾಡಿನಿಂದ ಹೊಡೆದು ಮಹಿಳೆ ಕೊಲೆ

Published On :

ಮೈಸೂರು: ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ರಾಡಿನಿಂದ ಹೊಡೆದು ಕೊಲೆ ಮಾಡಿ, ಆಕೆಯ ಪುತ್ರಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಹೊರವಲಯದಲ್ಲಿರುವ ಸಿದ್ದಲಿಂಗಪುರದಲ್ಲಿ ಗುರುವಾರ ನಡೆದಿದೆ.
ಮೈಸೂರು- ಬೆಂಗಳೂರು ರಸ್ತೆಯಲ್ಲಿರುವ ಸಿದ್ದಲಿಂಗಪುರ ನಿವಾಸಿ ಪದ್ಮಾ (40) ಕೊಲೆಯಾದವರು. ಇವರ ಪುತ್ರಿ ವೈಭವಿ (10) ತೀವ್ರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂಲತಃ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆರೆತೊಣ್ಣೂರಿನ ಪದ್ಮಾ ಅವರಿಗೆ ಶಿಂಡಭೋಗನಹಳ್ಳಿ ಗ್ರಾಮದ ಗೋಪಾಲ್ ಎಂಬವರೊಂದಿಗೆ ವಿವಾಹವಾಗಿತ್ತು. ಕೆಲವು ವರ್ಷ ಅನ್ಯೊನ್ಯವಾಗಿದ್ದ ದಂಪತಿ ಕಳೆದ 4 ವರ್ಷಗಳಿಂದ ದೂರವಾಗಿದ್ದರು. ಒಂಟಿಯಾದ ಪದ್ಮಾಗೆ ಸಹೋದರ ಶಿವರಾಜು ನೆರವಾದರು. ಸಿದ್ದಲಿಂಗಪುರ ಬಳಿಯಿರುವ ಶಿವರಾಜು ತೋಟ ನೋಡಿಕೊಂಡು ಮಗಳಿಗೆ ವಿದ್ಯಾಭ್ಯಾಸ ಮಾಡಿಸಿಕೊಂಡಿರಲು ಸಿದ್ದಲಿಂಗಪುರದಲ್ಲಿ ಬಾಡಿಗೆ ಮನೆ ಮಾಡಿಕೊಟ್ಟಿದ್ದರು. ಅಣ್ಣನ ತೋಟ ನೋಡಿಕೊಂಡಿದ್ದ ಪದ್ಮಾ, ಮನೆಯ ಪಕ್ಕದಲ್ಲೇ ಸಣ್ಣದೊಂದು ಟೀ ಅಂಗಡಿ ನಡೆಸುತ್ತಿದ್ದರು.
ಗುರುವಾರ ಬೆಳಗ್ಗೆ ತಾಯಿ ಮತ್ತು ಮಗಳು ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮೇಟಗಳ್ಳಿ ಠಾಣೆ ಪೊಲೀಸರು, ಬಾಲಕಿ ವೈಭವಿ ಉಸಿರಾಡುತ್ತಿರುವುದು ಗೊತ್ತಾಗುತ್ತಿದ್ದಂತೆ ಆಸ್ಪತ್ರೆಗೆ ರವಾಸಿದರು. ಬಾಲಕಿಯ ತಲೆಭಾಗಕ್ಕೆ ರಾಡುಗಳಿಂದ ಬಲವಾಗಿ ಹೊಡೆಯಲಾಗಿದ್ದು, ಮೆದುಳಿಗೆ ತೀವ್ರ ಹಾನಿಯಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆದರೂ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದ್ಮಾ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ, ಡಿಸಿಪಿ ಎಂ.ಎಂ. ಮಹದೇವಯ್ಯ, ಎಸಿಪಿ ಸಿ.ಡಿ. ಜಗದೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.