ಮೈಸೂರು

ಹೈನುಗಾರಿಕೆಯಲ್ಲಿ ತೊಡಗಲು ರೈತರಿಗೆ ಕರೆ

Published On :


ಹುಣಸೂರು: ರೈತರು ವ್ಯವಸಾಯದ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಂಡು ಆರ್ಥಿಕವಾಗಿ ಸದೃಢವಾಗಬೇಕು ಎಂದು ಜಿಪಂ ಶಿಕ್ಷಣ ಮತ್ತು ಅರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ. ಲಲಿತಾದೇವೇಗೌಡ ಕರೆ ನೀಡಿದರು.
ತಾಲೂಕಿನ ಹನಗೋಡು ಹೋಬಳಿಯ ಹರೀನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಅವರು ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ರೈತರು ವ್ಯವಸಾಯದ ಜೊತೆಗೆ ಉಪ ಕಸುಬುಗಳಾದ ಹೈನುಗಾರಿಕೆ, ಕುರಿ, ಮೇಕೆ ಸಾಕಣೆ ಮಾಡಿ ತಮ್ಮ ದೈನಂದಿನ ಖರ್ಚು ವೆಚ್ಚಕ್ಕೆ ಅನುಕೂಲತೆ ಮಾಡಿಕೊಂಡು, ನೆಮ್ಮದಿ ಜೀವನ ಸಾಗಿಸಬಹುದು ಎಂದು ತಿಳಿಸಿದರು. ಕಟ್ಟಡ ಕಾಮಗಾರಿಗೆ ಜಿಪಂ ಅನುದಾನದಲ್ಲಿ 50 ಸಾವಿರ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಮೈಸೂರು- ಚಾಮರಾಜನಗರ ಹಾಲು ಒಕ್ಕೂಟದ ನಿರ್ದೇಶಕರಾದ ಕುಮಾರ್, ಎ.ಟಿ. ಸೋಮಶೇಖರ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಡಿ. ಹರೀಶ್ಗೌಡ, ಎಪಿಎಂಸಿ ಅಧ್ಯಕ್ಷ ಈರಣ್ಣ, ಕಟ್ಟಡ ಸ್ಥಳ ದಾನಿ ಹಾಗೂ ಹರೀನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಗದೀಶಪ್ಪ, ಒಕ್ಕೂಟದ ಅಧಿಕಾರಿ ಸಣ್ಣ ತಮ್ಮೇಗೌಡ, ನಿರ್ದೇಶಕರಾದ ಮಹೇಶ್, ಕುಮಾರಸ್ವಾಮಿ, ಶಿವಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.