ಮೈಸೂರು

120 ಹಾಡಿಗಳಲ್ಲಿ ಆರೋಗ್ಯ ಉಚಿತ ತಪಾಸಣೆ

Published On :

ಕ.ಪ್ರ.ವಾರ್ತೆ   ಎಚ್.ಡಿ.ಕೋಟೆ   ಜ.24
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ 120 ಹಾಡಿಗಳಲ್ಲಿ ಆರೋಗ್ಯದ ಉಚಿತ ತಪಾಸಣೆ ಶಿಬಿರ ನಡೆಸುವುದಾಗಿ ಜಿಪಂ ಅಧ್ಯಕ್ಷ ಕೂರ್ಗಳ್ಳಿ ಎಂ. ಮಹದೇವು ಹೇಳಿದರು.
ತಾಲೂಕಿನ ಚಕ್ಕೋಡನಹಳ್ಳಿ ಗ್ರಾಪಂ ವ್ಯಾಪ್ತಿಯ ಬಸವನಗಿರಿ ಹಾಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ತಾಲೂಕಿನಲ್ಲಿ ಸರ್ಕಾರದ ಎಲ್ಲ ಸವಲತ್ತುಗಳು ಸಮರ್ಪಕವಾಗಿ ತಲುಪುತ್ತಿಲ್ಲ. ತಾಲೂಕಿನಲ್ಲಿ ಸುಮಾರು 120 ಹಾಡಿಗಳು ಇದ್ದು ಗಿರಿಜನರ ಆರೋಗ್ಯಕ್ಕೆ, ಗಿರಿಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಸುಮಾರು 6,683 ಮಂದಿ ಗಿರಿಜನರು ಸಕಾಲದಲ್ಲಿ ತಮಗೆ ಉಂಟಾದ ತೊಂದರೆಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯದೆ ಇರುವುದರಿಂದ ಗಿರಿಜನರ ಹಾಡಿಗಳಿಗೆ ತೆರಳಿ ಅವರಿಗೆ ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಸವನಗಿರಿ ಹಾಡಿಯ ಆಶ್ರಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಪಲ್ಲವಿ ಕಿಡ್ನಿ ತೊಂದರೆಯಿಂದ ಬಳಲುತ್ತಿರುವುದು ಬೆಳಕಿಗೆ ಬಂತು. ಇಂದಿನ ಶಿಬಿರದಲ್ಲಿ ಕೆ.ಆರ್. ಆಸ್ಪತ್ರೆ, ಬಿಜಿಎಸ್ ಅಪೋಲೋ, ಕೊಲಂಬಿಯಾ ಏಷ್ಯಾ, ಜೆಎಸ್ಎಸ್ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ತಾಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಬಿ.ಜಿ. ಮಹೇಂದ್ರ, ಆರೋಗ್ಯ ಇಲಾಖೆ ಅಧಿಕಾರಿಗಳಾದ ವಾಮದೇವ, ಪ್ರಸಾದ್, ಮಹದೇವ್, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ಜಿಪಂ ಸದಸ್ಯ ಚಿಕ್ಕಣ್ಣೇಗೌಡ, ತಾಪಂ ಸದಸ್ಯ ಸುಂದರ ನಾಯಕ, ರಂಗೇಗೌಡ, ನಾಗರಾಜು, ಜಿಪಂ ಎಇಇ ಮಂಜುನಾಥ್, ಗಿರಿಜನ ವಿಸ್ತಾರಣಾಧಿಕಾರಿ ಶಿವಲಿಂಗಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.