ಚುನಾಯಿತ ಪ್ರತಿನಿಧಿಗಳು ಸಮಸ್ಯೆಗೆ ಸ್ಪಂದಿಸಿ
ಕೆ.ಆರ್. ನಗರ: ಚುನಾಯಿತ ಜನಪ್ರನಿಧಿಗಳು ಪತ್ರಿಕೆಗಳು ನೀಡುವ ಎಚ್ಚರಿಕೆಯನ್ನು ಗಣನೆಗೆ ತೆಗೆದುಕೊಂಡು, ಕೆಲಸ ಮಾಡಿದರೆ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಜನರ ಮನಸ್ಸನ್ನು ಅರ್ಥ ಮಾಡಿಕೊಳ್ಳಬಹುದು ಎಂದು ಮಂಡ್ಯ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್.ವಿ. ಗಣೇಶ್ ಹೇಳಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹೊರತಂದಿರುವ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಮಾಜದ ಸರ್ವರ ಏಳಿಗೆಯನ್ನು ಬಯಸುವ ಪತ್ರಿಕೆ ಸೇವೆ ಟಿವಿ ಮಾಧ್ಯಮಗಳಿಗಿಂತ ಭಿನ್ನವಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಸ್ಪಂದಿಸುತ್ತಿವೆ ಎಂದು ತಿಳಿಸಿದರು.
ತಾಪಂ ಅಧ್ಯಕ್ಷೆ ಶಶಿಕಲಾ ರಮೇಶ್, ಜಿಪಂ ಸದಸ್ಯೆ ಕಲ್ಪನಾ ಧನಂಜಯ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್. ಯಧುಗಿರೀಶ್, ತಾಲೂಕು ಕಸಾಪ ಅಧ್ಯಕ್ಷ ಜಿ.ಕೆ. ರಾಜು, ಸಂಘದ ಅಧ್ಯಕ್ಷ ಕುಪ್ಪೆ ಮಹದೇವಸ್ವಾಮಿ ಮಾತನಾಡಿದರು.
ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭೇರ್ಯ ಮಹೇಶ್, ಎಪಿಎಂಸಿ ಉಪಾಧ್ಯಕ್ಷ ತೋಟಪ್ಪ ನಾಯಕ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ತಾ. ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ತಾ. ಯುವ ಜೆಡಿಎಸ್ ಅಧ್ಯಕ್ಷ ಹೆಬ್ಬಾಳು ಸುಜಯ್, ತಾಪಂ ಸದಸ್ಯ ನಾಗಣ್ಣ, ಪುರಸಭಾ ಸದಸ್ಯ ಉಮೇಶ್, ತಾ. ಸರ್ವೋದಯ ಪಕ್ಷದ ಅಧ್ಯಕ್ಷ ಗರುಡಗಂಭದಸ್ವಾಮಿ, ಹೊಸೂರು ಬಿ. ರಮೇಶ್, ಗುತ್ತಿಗೆದಾರ ಹರ್ಷಕುಮಾರಗೌಡ, ಎಚ್.ಆರ್. ಮಧುಚಂದ್ರ, ಸ್ಪಿನ್ಕೃಷ್ಣ ಇದ್ದರು.
28 ರಂದು ಪದವಿ ಪ್ರದಾನ ಸಮಾರಂಭ
ಎಚ್.ಡಿ. ಕೋಟೆ: ಪಟ್ಟಣದ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಜ.28 ರಂದು ಪದವಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಬಸವೇಗೌಡ ಹೇಳಿದರು.
ಅಂದಿನ ಸಮಾರಂಭದಲ್ಲಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಪದವಿ ಪ್ರದಾನ ಮಾಡುವರು. ಶಾಸಕ ಎಸ್. ಚಿಕ್ಕಮಾದು ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಎನ್. ಅಣ್ಣೇಗೌಡ ಭಾಗವಹಿಸುವರು ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪಟ್ಟಣದಲ್ಲಿ 1997ರಲ್ಲಿ ಆರಂಭವಾದ ಈ ವಿದ್ಯಾಸಂಸ್ಥೆಯು ಇಲ್ಲಿಯವರೆಗೆ ತಾಲೂಕಿನ ಎಲ್ಲ ಜನತೆಯ ಸಹಕಾರದೊಂದಿಗೆ ಅಬಿವೃದ್ಧಿಯನ್ನು ಹೊಂದಿ ತಾಲೂಕಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. 2001-02 ರಲ್ಲಿ ಪದವಿ ಕಾಲೇಜು ಆರಂಭವಾಗಿ 2002 ರಿಂದ 2012 ರವರೆಗೂ ಪ್ರತಿ ವರ್ಷವು ಪದವಿ ವಿದ್ಯಾರ್ಥಿಗಳು ಚಿನ್ನದ ಪದಕ ಗಳಿಸುತ್ತಾ ಬಂದಿದ್ದಾರೆ. ಸಂಸ್ಥೆಯಲ್ಲಿ ಮುಕ್ತ ವಿವಿಯ ಕೇಂದ್ರವು ಆರಂಭವಾಗಿದೆ. ಈವರೆಗೆ ಸುಮಾರು 1000 ಮಂದಿ ವಿಧ್ಯಾರ್ಥಿಗಳಾಗಿ ಪದವಿ ಪಡೆದಿದ್ದಾರೆ ಎಂದರು.
ಪ್ರಾಂಶುಪಾಲ ಪ್ರಕಾಶ್, ಜಯಪ್ರಕಾಶ್, ಬೈರಪ್ಪ, ವೆಂಕಟೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

