ಮೈಸೂರು

ಆದಿಶ್ರೀಗಳ ಸೇವಾ ಕಾರ್ಯ ಮಾದರಿ: ಸಾರಾ

Published On :

ಕೆ.ಆರ್. ನಗರ: ಆದಿಚುಂಚನಗಿರಿ ಶ್ರೀಗಳ ಸಮಾಜಮುಖಿ ಕಾರ್ಯಗಳು ಮತ್ತು ಶಿಕ್ಷಣ ಪರ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು. ಪಟ್ಟಣದ ಒಕ್ಕಲಿಗರ ವಿದ್ಯಾರ್ಥಿ ನಿಲಯದಲ್ಲಿ ಏರ್ಪಡಿಸಿದ್ದ ಆದಿಚುಂಚನಗಿರಿ ಶ್ರೀಗಳ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ಸಮಾಜದವರನ್ನು ಸಮಾನತೆಯಿಂದ ಕಂಡು ಸರ್ವರಿಗೂ ಅಕ್ಷರ ದಾಸೋಹ, ಅನ್ನ ದಾಸೋಹ ನೀಡಿದ ಶ್ರೀಗಳು ಎಂದಿಗೂ ಅಮರರಾಗಿರುತ್ತಾರೆ ಎಂದರು. ಮಠವನ್ನು ಜಾತಿಗೆ ಸೀಮಿತಗೊಳಿಸದೆ ಜಾತ್ಯತೀತವಾಗಿ ಬೆಳೆಸಿದ ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ. ಅಲ್ಲದೆ, ಮಠದ ಉತ್ತರಾಧಿಕಾರಿಯ ನೇಮಕದಲ್ಲಿಯೂ ಅವರು ತೋರಿದ ಜಾಣ್ಮೆ, ತೆಗೆದುಕೊಂಡ ನಿರ್ಧಾರ ಉತ್ತಮವಾಗಿದ್ದು ಮಠವನ್ನು ಮುನ್ನಡೆಸುವ ಜವಬ್ದಾರಿ ಹೊತ್ತಿರುವ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಎಲ್ಲರ ಮೇಲೂ ಇದೆ ಎಂದರು.


ಟಿಕೆಟ್ ಆಕಾಂಕ್ಷಿಯೆಂದು ತಾ.ಅಧ್ಯಕ್ಷರಿಗೆ ಜಿಲ್ಲಾಧ್ಯಕ್ಷ ಮನವಿ!

ಪಿರಿಯಾಪಟ್ಟಣ: ತಾವು ಸಹ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮಗೆ ಬೆಂಬಲ ನೀಡುವಂತೆ ಬಿಜೆಪಿ ಜಿಲ್ಲಾ ಮುಖಂಡ ಗೋಪಾಲ್ರಾವ್ ಪಿರಿಯಾಪಟ್ಟಣ ಬಿಜೆಪಿ ತಾ. ಅಧ್ಯಕ್ಷ ಆರ್.ಟಿ. ಸತೀಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಗೋಪಾಲ್ರಾವ್, ತಾವು 40 ವರ್ಷಗಳಿಂದ ಪಕ್ಷದಲ್ಲಿ ಪ್ರಾಮಾಣಿಕ ಕಾರ್ಯಕರ್ತನಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವಿದ್ದು, ಪಕ್ಷದ ಏಳಿಗೆಗಾಗಿ ದುಡಿಯುತ್ತಿದ್ದು, ಈ ಹಿಂದೆಯೂ ಕೂಡ ಕೆಲವು ಚುನಾವಣೆಗಳಲ್ಲಿ ತಾವು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಪ್ರಯತ್ನಿಸಿರುವುದಾಗಿ ತಿಳಿಸಿದರು. ಒಂದು ವೇಳೆ ಪಕ್ಷ ತಮಗಲ್ಲದೆ ಮತ್ಯಾರಿಗಾದರೂ ಟಿಕೆಟ್ ನೀಡಿದರೂ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕವಾಗಿ ದುಡಿಯುವುದಾಗಿ ತಿಳಿಸಿದರು. ತಾಲೂಕಿನಲ್ಲಿ ಮೂರು ದಿನಗಳ ಮನೆ ಮನೆಗೆ ಬಿಜೆಪಿ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಸಮ್ಮುಖದಲ್ಲೆ ತಾ. ಅಧ್ಯಕ್ಷರಿಗೆ ಮನವಿ ನೀಡಲಾಗಿದ್ದು, ಇಬ್ಬರೂ ನಾಯಕರಿಗೂ ಅಚ್ಚರಿ ಉಂಟುಮಾಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.