ಮೈಸೂರು

ಗ್ರಂಥಾಲಯಕ್ಕೆ ಪುಸ್ತಕಗಳ ಆಹ್ವಾನ

Published On :

ಮೈಸೂರು: ಜುಲೈಯಿಂದ ಡಿಸೆಂಬರ್ 2013 ರವರೆಗೆ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಲಲಿತಕಲೆ, ವಿಜ್ಞಾನ, ಮಾನವಿಕ, ವೈದ್ಯಕೀಯ, ತಾಂತ್ರಿಕ, ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕ, ಲೇಖಕ-ಪ್ರಕಾಶಕ, ಪ್ರಕಾಶಕರು, ಸಂಸ್ಥೆಗಳು ಹಾಗೂ ವಿತರಕರಿಂದ ಎರಡನೇ ಹಂತದಲ್ಲಿ ಪುಸ್ತಕಗಳನ್ನು ಆಹ್ವಾನಿಸಿದೆ. ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನ, ಬೆಂಗಳೂರು ಇಲ್ಲಿಗೆ ಜ. 31 ರೊಳಗೆ ಕಾಪಿರೈಟ್ ಮಾಡಿಸಬೇಕು. ಆ ಪುಸ್ತಕಗಳನ್ನು ಮಾತ್ರ ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಫೆ.15ರೊಳಗಾಗಿ ಸಲ್ಲಿಸಬಹುದು.

ಜೆಎಸ್ಎಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮೈಸೂರು: ನಗರದ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಯೂತ್ ರೆಡ್ಕ್ರಾಸ್ ವತಿಯಿಂದ ಎನ್ಎಸ್ಎಸ್, ಎನ್ಸಿಸಿ ಮತ್ತು ಭಾರತ್ ಸ್ಕೌಟ್ಸ್, ರೋವರ್ಸ್ ವಿಭಾಗಗಳ ಸಹಯೋಗದಲ್ಲಿ ರಕ್ತದಾನ ಮತ್ತು ರಕ್ತಮಾದರಿ ಪರೀಕ್ಷೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಬಿ. ಮಲ್ಲಿಕಾರ್ಜುನ ಪಂಡಿತ್ ಪ್ರಮಾಣಪತ್ರಗಳನ್ನು ವಿತರಿಸಿದರು. ಜೆಎಸ್ಎಸ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ನ ಡಾ.ಪಲ್ಲವಿ, ಕಾಲೇಜಿನ ಶೈಕ್ಷಣಿಕ ಡೀನ್ ಪ್ರೊ.ಎಂ. ಮಹದೇವಪ್ಪ, ರೆಡ್ಕ್ರಾಸ್ ಸಂಚಾಲಕ ಟಿ.ಎಂ. ಮರಿಸ್ವಾಮಿ, ಎನ್ಎಸ್ಎಸ್ ಸಂಚಾಲಕ ಬಿ.ಬಿ. ವರಪ್ರಸಾದ್ ಹಾಗೂ ರೋವರ್ಸ್ ಸಂಚಾಲಕ ಎಂ.ಎಸ್. ವೆಂಕಟರಾವ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.