ಸಾಂಸ್ಕೃತಿಕ ಚಟುವಟಿಕೆಯಿಂದ ಮನೋವಿಕಾಸ: ವಸುಂಧರಾ
ಮೈಸೂರು: ಯೋಗಾಭ್ಯಾಸ, ನೃತ್ಯ, ಕ್ರೀಡಾ ಚಟುವಟಿಕೆಗಳಿಂದ ಯಾವುದೇ ವ್ಯಕ್ತಿ ಮನೋವಿಕಾಸ ಹೊಂದಲು ಸಾಧ್ಯ ಎಂದು ಅಂತಾರಾಷ್ಟ್ರೀಯ ಭರತನಾಟ್ಯ ಕಲಾವಿದೆ ಡಾ.ವಸುಂಧರಾ ದೊರೆಸ್ವಾಮಿ ಹೇಳಿದರು. ಜೆ.ಪಿ. ನಗರದಲ್ಲಿರುವ ಜೆಎಸ್ಎಸ್ ಪಿಯು ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಈಗಿನ ತಲೆಮಾರಿನ ಯುವಜನತೆ ವಿದೇಶಿ ಸಂಸ್ಕೃತಿಯತ್ತ ವಾಲುತ್ತಿರುವುದು ನಿಜಕ್ಕೂ ಬೇಸರ ತರಿಸುತ್ತದೆ. ಸ್ವದೇಶಿ ಕಲೆಗಳಾದ ನೃತ್ಯ, ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವುದರ ಮೂಲಕ ಆರೋಗ್ಯಕರ ಜೀವನ ನಡೆಸುವುದರ ಜತೆಗೆ ನಮ್ಮ ದೇಶದ ಸಂಸ್ಕೃತಿಯನ್ನು ರಕ್ಷಿಸಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಚ್. ಬಸವನಗೌಡಪ್ಪ ಮಾತನಾಡಿದರು. ಅಂತಾರಾಷ್ಟ್ರೀಯ ಟೆನಿಸ್ ಕ್ರೀಡಾಪಟು ಆರ್.ನಾಗರಾಜು, ಕಾಲೇಜಿನ ಪ್ರಾಂಶುಪಾಲೆ ಉಮಾಮಹೇಶ್ವರಿ, ಸಾಂಸ್ಕೃತಿಕ ಚಟುವಟಿಕೆಗಳ ಅಧ್ಯಾಪಕ ಕಾರ್ಯದರ್ಶಿ ಎಚ್.ಎಂ. ಮಹದೇವಪ್ಪ, ಕ್ರೀಡಾ ಸಂಚಾಲಕ ಎಚ್.ಎನ್. ನಾಗರಾಜು ಇದ್ದರು.
ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಡಾ.ಉಮೇಶ್
ಮೈಸೂರು: ಸಮೂಹ ಮಾಧ್ಯಮಗಳು ಬಿತ್ತರಿಸುತ್ತಿರುವ ದೃಶ್ಯಗಳು ಸಮಾಜಕ್ಕೆ ಅಪಾಯಕಾರಿಯಾಗಿವೆ ಎಂದು ಮೈಸೂರು ಆಕಾಶವಾಣಿಯ ಡಾ.ಮೈಸೂರು ಉಮೇಶ್ ಅಭಿಪ್ರಾಯಪಟ್ಟರು. ನಗರದ ಊಟಿ ರಸ್ತೆಯ ಜೆಎಸ್ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ವೇದಿಕೆ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿರು. ರಣಜಿ ಹಾಗೂ ಕೆಪಿಎಲ್ ಕ್ರಿಕೆಟ್ ಆಟಗಾರ ಎಸ್.ಧನಂಜಯ ಮಾತನಾಡಿ, ಕ್ರೀಡಾ ಮನೋಭಾವನೆಯನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಕೀರ್ತಿ ಗಳಿಸಬೇಕೆಂದು ಹಾರೈಸಿದರು. ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎಂ. ಪುಟ್ಟು, ನಾಗಲಾಂಬಿಕೆ, ಕ್ರೀಡಾ ಸಮಿತಿಯ ಸಂಚಾಲಕ ಸಿ.ರೇವಣ್ಣ ಇದ್ದರು. ಪೂಜ ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

