ಮೈಸೂರು

ಬಳ್ಳಾರಿಯಲ್ಲಿ ಶಿಕ್ಷಕರ ರಾಜ್ಯಮಟ್ಟದ ಸಮ್ಮೇಳನ

Published On :

ಮೈಸೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಮ್ಮೇಳನವು ಫೆಬ್ರವರಿ ಎರಡನೇ ವಾರದಲ್ಲಿ ಬಳ್ಳಾರಿಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ ಅಧ್ಯಕ್ಷತೆ ವಹಿಸುವರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಅನೇಕ ಸಚಿವರು, ಶಾಸಕರು, ಶಿಕ್ಷಣ ತಜ್ಞರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸುವರು ಎಂದು ತಾಲೂಕು ಘಟಕದ ಅಧ್ಯಕ್ಷ ಜಿ.ವಿ. ನಾಗೇಶ್, ಪ್ರಧಾನ ಕಾರ್ಯದರ್ಶಿ ಜವರೇಗೌಡ ತಿಳಿಸಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರು ತಮ್ಮ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರ ಸಂಘದ ನಿರ್ದೇಶಕರನ್ನು ಸಂಪರ್ಕಿಸಿ, ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಸ್ಮಾರ್ಟ್ ಕಾರ್ಡ್ ಒದಗಿಸುವ ಕಾರ್ಯ ಯೋಜನೆ ರೂಪಿಸಿದ್ದು, ಸ್ಮಾರ್ಟ್ ಕಾರ್ಡ್ನ್ನು ಶಿಕ್ಷಕರಿಗೆ ವಿತರಿಸಲು ಶಿಕ್ಷಕರ ಸಂಘದ ನಿರ್ದೇಶಕರಿಗೆ ನೀಡಲಾಗಿದೆ ಎಂದಿದ್ದಾರೆ.

ವಿದ್ಯಾರ್ಥಿ ಸಮರ್ಥ್ಗೆ ಅರಳುವ ವಿಜ್ಞಾನಿ ಪ್ರಶಸ್ತಿ

ಮೈಸೂರು: ಇತ್ತೀಚೆಗೆ ಮುಂಬೈನಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಗರದ ಪ್ರಮತಿ ಹಿಲ್ ವ್ಯೂ ಅಕಾಡೆಮಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಪಿ.ಸಮರ್ಥ್ ಅವರ ಉತ್ತಮ ಪ್ರದರ್ಶನಕ್ಕೆ ಅರಳುವ ವಿಜ್ಞಾನಿ ಪ್ರಶಸ್ತಿ ಹಾಗೂ 5 ಲಕ್ಷ ನಗದು ಪುರಸ್ಕಾರ ಸಂದಿದೆ.ಶ್ರೀರಾಂಪುರ ನಿವಾಸಿ ಪುಟ್ಟರಾಜು ಮತ್ತು ಪೂರ್ಣಿಮಾ ದಂಪತಿ ಪುತ್ರ ಪಿ. ಸಮರ್ಥ್ ಅವರು ರೂಪಿಸಿದ್ದ ವಾಟರ್ ರಾಕೆಟ್ನ ಮಾದರಿ ಮೆಚ್ಚುಗೆ ಗಳಿಸಿತ್ತು ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ವಿ. ರಾಜೀವ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸ್ಪರ್ಧೆಯಲ್ಲಿ ದೇಶದ ವಿವಿಧೆಡೆಯಿಂದ ಒಟ್ಟು 280 ಶಾಲೆಗಳ 8600 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮರ್ಥ್ ರೂಪಿಸಿದ್ದ 100 ಮೀಟರ್ ಎತ್ತರ ಹಾರುವ ರಾಕೆಟ್ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಯಿತು. ಹಾಗಾಗಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗೆ ಪ್ರಥಮ ಬಹುಮಾನ ಮತ್ತು 5 ಲಕ್ಷ ಬಹುಮಾನ ಬಂದಿರುವುದು ಖುಷಿ ತಂದಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.